ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ 70 ರ ವೃದ್ಧನಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
2023ನೇ ಸಾಲಿನಲ್ಲಿ ತಾಲ್ಲೂಕಿನ ಲೈಂಗಿಕ ದೌರ್ಜನ್ಯ ವೆಸಗಿರುವ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪ್ರಕರಣದ ತನಿಖಾಧಿಕಾರಿ ಹೊಳೆಹೊನ್ನೂರು ಪಿಐ ಲಕ್ಷ್ಮಿಪತಿ ಆರ್.ಎಲ್ ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾಗಿ ಶ್ರೀಧರ್ ಹೆಚ್.ಆರ್, ವಾದ ಮಂಡಿಸಿದ್ದರು.
ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಮೋಹನ್ ಜೆ.ಎಸ್ ಆರೋಪಿ 70 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 2,10,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 01 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದಾರೆ.
ಪರಿಹಾರ ರೂಪವಾಗಿ ದಂಡದ ಮೊತ್ತದಲ್ಲಿ 2 ಲಕ್ಷ ಮತ್ತು ಸರ್ಕಾರದಿಂದ 2 ಲಕ್ಷರೂಗಳನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಿರುತ್ತಾರೆ.