ವಿಜಯ ಸಂಘರ್ಷ
ಭದ್ರಾವತಿ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಯವರನ್ನು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಗುತ್ತಿಗೆ ಕಾರ್ಮಿಕ ಮುಖಂಡ ರೊಂದಿಗೆ ತೆರಳಿ ಚರ್ಚಿಸಿದರು.
ಇತ್ತೀಚೆಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಕೇಂದ್ರ ಬೃಹತ್ ಕೈಗಾರಿಕೆ ಹಾಗು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರೆಸುತ್ತಿರುವುದಾಗಿ ಭರವಸೆ ನೀಡಿರುವ ಹಿನ್ನಲೆಯಲ್ಲಿ ಶಾರದ ಅಪ್ಪಾಜಿ ಗುತ್ತಿಗೆ ಕಾರ್ಮಿಕರಿಗೆ ಧೈರ್ಯ ತುಂಬುವ ಮೂಲಕ ಅವರ ಸಮಸ್ಯೆ ಗಳ ಕುರಿತು ಚರ್ಚಿಸಿದರು.
ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕರು ಇದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆಂಬ ಮಾಹಿತಿಯನ್ನು ಕಾರ್ಮಿಕರು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜೆಡಿಎಸ್ ಪಕ್ಷದ ನಗರ ಅಧ್ಯಕ್ಷ ಆರ್.ಕರುಣಾ ಮೂರ್ತಿ, ಪಕ್ಷದ ಮುಖಂಡರಾದ ಟಿ.ಚಂದ್ರೇಗೌಡ, ಭಾಗ್ಯಮ್ಮ ಇತರರಿದ್ದರು.