ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ "ವಿಶ್ವ ಮಾನವ" ಪ್ರಶಸ್ತಿ ಪ್ರದಾನ ನಾಳೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿ ಸಲಾಗುವುದು ಎಂದು ಸಮಿತಿ ಅಧ್ಯಕ್ಷ ಬಿ.ಎನ್‌.ರಾಜು ಹೇಳಿದರು. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಗೋಡು ಅವರ ಮಾನವೀಯ ಸೇವೆಗಾಗಿ ಸೆ.10ರಂದು ತಿಮ್ಮಪ್ಪ ಅವರಿಗೆ ಸಾಗರದ ಅವರ ನಿವಾಸದಲ್ಲಿಯೇ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. 

ಭದ್ರಾವತಿ ತಾಲ್ಲೂಕಿನ ಡಿ.ಬಿ ಹಳ್ಳಿ ಗ್ರಾಮದ 33 ರೈತರು ಸಾಗುವಳಿ ಮಾಡಿಕೊಂಡು ಬರುತ್ತಿದ್ದ ಭೂಮಿಯ ಸಾಗುವಳಿ ಚೀಟಿಗಳನ್ನು ರದ್ದು ಗೊಳಿಸಿರುವುದು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಲವು ದಿನಗಳಿಂದ ಧರಣಿ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸೌಜನ್ಯಕ್ಕೂ ಭೇಟಿ ನೀಡಿಲ್ಲ. ಹೀಗಾಗಿಯೇ ಸೊರಬದಲ್ಲಿರುವ ಎಸ್‌. ಬಂಗಾರಪ್ಪ ಅವರ ಸಮಾಧಿ ಸ್ಥಳದ ಮುಂದೆ ಸೆ.10ರಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದರು.

ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಮತ್ತು ಶಾಲಾ-ಕಾಲೇಜುಗಳಲ್ಲಿ ಅ.26ರಂದು ಮಾಜಿ ಮುಖ್ಯಮಂತ್ರಿ ದಿ.ಎಸ್‌. ಬಂಗಾರಪ್ಪ ಅವರ ಜನ್ಮ ದಿನ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ರೈತರು ಭೂಮಿಯನ್ನು ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿ ದ್ದಾರೆ. ಆದರೆ, ಅರಣ್ಯ ಇಲಾಖೆ ಯವರು ಭೂಮಿ ನಮ್ಮದು ಎನ್ನುತ್ತಿರು ವುದು ಆತಂಕದ ಬೆಳವಣಿಗೆ. ರೈತರನ್ನು ಒಕ್ಕಲೆಬ್ಬಿಸುವಂತಹ ಕೆಲಸ ಸರ್ಕಾರ ಮಾಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರು ರೈತ ವಿರೋಧಿ ನೀತಿಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಸಮಿತಿ ಪ್ರಮುಖರು ಗೋಷ್ಟಿಯಲ್ಲಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು