ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಡಿಸಿ ಕರೆ

ವಿಜಯ ಸಂಘರ್ಷ ನ್ಯೂಸ್ 
ಯಾದಗಿರಿ: ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸೆ:15 ರಂದು ಆಚರಿಸುತ್ತಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಯಾದಗಿರಿ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಬಾಗವಹಿಸಲು ಜಿಲ್ಲಾಧಿಕಾರಿ ಸುಶೀಲ ಬಿ ಕರೆ ನೀಡಿದರು.

ಜಿಲ್ಲೆಯ ಯರಗೋಳದಿಂದ ರಾಯಚೂರ ಜಿಲ್ಲೆಯ ಗಡಿಬಾಗ ಗೂಗಲ್ ಬ್ರಿಡ್ಜ್ ನ ಸುಮಾರು 61 ಕಿಲೋ ಮೀಟರ್ ವರೆಗೆ ಮಾನವ ಸರಪಳಿಯನ್ನು ವಿಶೇಷವಾಗಿ ಸರ್ಕಾರದಿಂದ ಹಮ್ಮಿಕೊಂಡಿದ್ದೂ, ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆ ಯರು, ಅಂಗನವಾಡಿ ಶಿಕ್ಷಕಿಯರು, ವಿವಿಧ ಸಂಘಟನೆಯ ಅಧ್ಯಕ್ಷರು ಕಾರ್ಯಕ್ರಮ ದಲ್ಲಿ ಬಾಗವಹಿಸಿ ಕಾರ್ಯಕ್ರಮವನ್ನೂ ಯಶಸ್ವಿಗೊಳಿಸಲು ಮನವಿ ಮಾಡಿದರು.

( ಶಿವು ರಾಠೋಡ್ ಯಾದಗಿರಿ )

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು