ವಿಜಯ ಸಂಘರ್ಷ
ಶಿವಮೊಗ್ಗ: ರಾಷ್ಟ್ರೀಯ ಕೈಗಾರಿಕಾ ಕಾರಿ ಡಾರ್ ಅಭಿವೃದ್ಧಿ ಕಾರ್ಯಕ್ರಮ ದಡಿಯಲ್ಲಿ ಶಿವಮೊಗ್ಗ ಮಹಾನಗರ ವನ್ನು ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಆಯ್ಕೆ ಮಾಡುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ಯಲ್ಲಿ ಇತ್ತೀಚೆಗೆ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಸಭೆಯಲ್ಲಿ ದೇಶದ 12 ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಅನುಮೋದನೆ ನೀಡಿದೆ. ನಗರವನ್ನು ಯೋಜನೆ ವ್ಯಾಪ್ತಿಯಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಆಯ್ಕೆ ಮಾಡಲು ಮುಂದಾಗಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.
ಜಿಲ್ಲೆ ಪ್ರವಾಸೋದ್ಯಮ, ಆಹಾರ ಉತ್ಪನ್ನ ಕ್ಷೇತ್ರ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು, ಈಗಾಗಲೇ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಕೊಡುಗೆಗಳನ್ನು ನೀಡುತ್ತಿದೆ. ರಾಜ್ಯದಿಂದ ಶಿವಮೊಗ್ಗ ಆಯ್ಕೆ ಮಾಡುವುದು ಅತ್ಯಂತ ಸೂಕ್ತವಾಗಿದೆ ಎಂದು ತಿಳಿಸಿದರು.
ಮಹಾನಗರಕ್ಕೆ ಹೊಂದಿಕೊಂಡಿರುವ ದೇವಕಾತಿಕೊಪ್ಪದಲ್ಲಿ ಕೈಗಾರಿಕೆಗೆ ಅವಶ್ಯ ವಿರುವ ಸೌಕರ್ಯ ಹಾಗೂ ಅನುಮತಿಯನ್ನು ಒದಗಿಸಬೇಕು. ಸಿದ್ಲಿಪುರ ಸೇರಿ ಕೈಗಾರಿಕೆಗೆ ಇರುವ ಅವಕಾಶ ಜಾಗಗಳಲ್ಲಿ ಹೊಸ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯು ಪ್ರಸ್ತುತ ವಾಯು ಸಾರಿಗೆ, ರೈಲ್ವೆ ಸಾರಿಗೆ ಹಾಗೂ ರಸ್ತೆ ಸಾರಿಗೆ ಯಲ್ಲಿ ಉತ್ತಮ ಸೌಲಭ್ಯ ಹೊಂದಿದ್ದು, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಗಳು ಹಾದುಹೋಗಿವೆ. ಕೈಗಾರಿಕಾ ಕ್ಷೇತ್ರಕ್ಕೆ ಪೂರಕವಾದ ವಾತಾವರಣ ಶಿವಮೊಗ್ಗದಲ್ಲಿದೆ. ಇಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಿದಲ್ಲಿ ಉದ್ಯೋಗ ಅವಕಾಶ ಹೆಚ್ಚು ಲಭ್ಯ ವಾಗುತ್ತದೆ ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.
ವಾಣಿಜ್ಯ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಹರ್ಷ ಕಾಮತ್, ಪ್ರದೀಪ್ ವಿ.ವಿಶ್ವೇಶ್ವರಯ್ಯ, ರಾಮಾ ಜೋಯೀಸ್ ಇತರರಿದ್ದರು.
Tags:
ಶಿವಮೊಗ್ಗ ವರದಿ