ವಾಣಿಜ್ಯ ಕೈಗಾರಿಕಾ ಸಂಘ ದಿಂದ ಯದುವೀರ ಕೃಷ್ಣದತ್ತ ಒಡೆಯರ್ ರವರಿಗೆ ಸನ್ಮಾನ

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ಮೈಸೂರು ಲೋಕಸಭಾ ಸದಸ್ಯರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷ ಡಿ.ಎಚ್.ಶಂಕರ ಮೂರ್ತಿ ಅವರ ನಿವಾಸದಲ್ಲಿ ಶನಿವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಭೇಟಿ ಮಾಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಅಧ್ಯಕ್ಷ ಬಿ. ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯ ಕುಮಾರ್, ಜಂಟಿ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್ ಮನೋಹರ್,ಲಕ್ಷ್ಮಿದೇವಿಗೋಪಿನಾಥ್ ಸೇರಿದಂತೆ ಅನೇಕರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು