ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್ ಗಳು, ಸ್ವತಂತ್ರ ಲೇಖನಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ ಟೆಂಟ್/ಪೆಂಡಾಲ್ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು https: //labour.ambedkars ahayahasta.in/api/ Account/Login ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದು ಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಯೋಜನೆಯ ಸೌಲಭ್ಯ ಪಡೆಯಲು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, 18 ರಿಂದ 60 ವಯೋಮಾನದವರಾಗಿರಬೇಕು. ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್‌ಐ/ಪಿಎಫ್ ಸೌಲಭ್ಯ ಹೊಂದಿರ ಬಾರದು. ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 1.00 ಲಕ್ಷ, ಅಪಘಾತದಲ್ಲಿ ಶಾಶ್ವತ/ಬಾಗಶಃ ಸಂಪೂರ್ಣ, ದುರ್ಬಲತೆ ರೂ. 1.00 ಲಕ್ಷಗಳವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ. ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯ ಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ/ ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದು.