ಡ್ರಿಂಕ್ ಅಂಡ್ ಡ್ರೈವ್ ಚಾಲಕನಿಗೆ ಬಿತ್ತು 10 ಸಾವಿರ ಫೈನ್

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪಿಎಸ್‌ಐ ಗರಿಷ್ಠ 10 ಸಾವಿರ ರೂ, ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ನಡೆದಿದೆ.

ನ್ಯಾಯಾಲಯದ ಸಂಖ್ಯೆ ಸಿಸಿ 6730/24 ರ ಪ್ರಕರಣದಲ್ಲಿ ಅ.23ರಂದು 10 ರು. ದಂಡ ವಸೂಲಾತಿ ಮಾಡಲಾಗಿದೆ. 

ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಈ ಕುರಿತು ಜಿಲ್ಲಾ ಪೊಲೀಸ್ ತನ್ನ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದೆ.

ದೇಶದಲ್ಲಿ ಯಾವುದೇ ವ್ಯಕ್ತಿ ಕುಡಿದು ವಾಹನ ಚಲಾವಣೆ ಮಾಡ್ತಿದ್ದರೆ ಸಂಚಾರಿ ಪೊಲೀಸರು ಆತನ ಮೇಲೆ ಸೆಕ್ಷನ್ 185ರಡಿ ದೂರು ದಾಖಲಿಸುತ್ತಾರೆ. ಬಿಎಸಿ ಪರೀಕ್ಷೆ ಮಾಡಿದ ನಂತರ ದಂಡ ವಿಧಿಸಬಹುದು. ವಾಹನವನ್ನು ಸಹ ಕಸ್ಟಡಿಗೆ ತೆಗೆದುಕೊಳ್ಳಬಹುದು.

 ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 207 ರ 207 ರ ಅಡಿಯಲ್ಲಿ ನಿಮ್ಮ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ. ವಾಹನದ ಎಲ್ಲಾ ದಾಖಲೆಗಳನ್ನು ಸಹ ಸಂಚಾರ ಪೊಲೀಸರು ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. 

ಏಳು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 2 ಸಾವಿರ ರೂಪಾಯಿ ಯಿಂದ 10 ಸಾವಿರ ರೂಪಾಯಿ ವರೆಗೆ ದಂಡ ವಿಧಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು