ವಿಜಯ ಸಂಘರ್ಷ ನ್ಯೂಸ್
ಕೆ.ಆರ್.ಪೇಟೆ: ತಾಲೂಕಿನ ಅಕ್ಕಿಹೆಬ್ಬಾಳು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕೆ.ಯತಿರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷರಾಗಿದ್ದ ಸೋಮು ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ
ಕೆ.ಯತಿರಾಜ್ ಅವರು ಬಿಟ್ಟರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಕೆ.ಯತಿರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ತಾಲೂಕು ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಭರತ್ ಕುಮಾರ್ ಘೋಷಿಸಿದರು.
ನೂತನ ಅಧ್ಯಕ್ಷರನ್ನ ಅಭಿನಂದಿಸಿ ಮಾತನಾಡಿದ ಜೆಡಿಎಸ್ ಮುಖಂಡ ಎ.ಆರ್ ರಘು ಹಿಂದಿನಿಂದಲೂ ನಮ್ಮ ಗ್ರಾಮದ ಸಹಕಾರ ಸಂಘಗಳಲ್ಲಿ ರಾಜಕೀಯ ಬೆರೆಸದೆ ಸೌಹಾರ್ದತೆಯಿಂದ ಅವಿರೋಧವಾಗಿ ಆಯ್ಕೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ.ಈ ಸಂದರ್ಭದಲ್ಲಿ ಹೈನುವಾರಿಕೆ ನೆರವಾಗಲಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮ ವಾಗಿ ಬೆಳೆದು ಲಕ್ಷಾಂತರ ಜನರಿಗೆ ಉದ್ಯೋಗ ವನ್ನು ಕಲ್ಪಿಸಿದೆ. ಹೈನುಗಾರಿಕೆಯಿಂದ ಆದಾಯ ಕಾಣಬಹುದಾಗಿದೆ.ಈ ಅವಕಾಶ ಬಳಸಿಕೊಳ್ಳಬೇಕು ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ನಿರ್ದೇಶಕರು ಸಂಘದಲ್ಲಿ ರಾಜಕಾರಣ ಬೆರಸದೇ ಪಕ್ಷಾತೀತವಾಗಿ ಪಾಲ್ಗೊಂಡು ಸಂಘದ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು.
ಬಳಿಕ ಮಾತನಾಡಿ ನೂತನ ಅಧ್ಯಕ್ಷ ಕೆ.ಯತಿರಾಜ್ ನನ್ನನ್ನು ಅವಿರೋಧವಾಗಿ ಅಧ್ಯಕ್ಷರಾಗಲು ಸಹಕರಿಸಿದ ಗ್ರಾಮದ ಮುಖಂಡರು ಹಾಗೂ ಸಂಘದ ಸದಸ್ಯ ರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು. ಷೇರುದಾರರು ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಬೇಕು.ಸಂಘವು ಉಳಿದರೆ ನಾವೆಲ್ಲರೂ ಉಳಿದಂತೆ.ಆದ್ದರಿಂದ ನನ್ನ ಆಡಳಿತ ಅವಧಿಯಲ್ಲಿ ಎಲ್ಲರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎ. ಆರ್ ಧರ್ಮರಾಜ್, ನಿರ್ದೇಶಕರುಗಳಾದ ಪವಿತ್ರ ಮಂಜುನಾಥ್,ಹರೀಶ್, ಯೋಗೇಶ್, ಬಸವರಾಜು ಎ.ಡಿ, ಶಂಕ್ರಪ್ಪ, ಶೈಲಜಾ ಎಸ್.ಎ,ಹರೀಶ್ ಕುಮಾರ್,ಎ.ಎಲ್ ವೆಂಕಟೇಶ್, ಸೋಮ, ಹರೀಶ್, ಸಂಘದ ಕಾರ್ಯದರ್ಶಿ ಯೋಗೇಶ್, ಅನಂತ,ಗ್ರಾ. ಪಂ ಸದಸ್ಯ ಹರೀಶ್, ಮುಖಂಡರಾದ ಎ.ಸಿ ಮಂಜೇಗೌಡ, ನಾರಾಯಣಸ್ವಾಮಿ,ಉದಯ ಕುಮಾರ್, ಕೆ.ರಮೇಶ್,ಸೇರಿದಂತೆ ಉಪಸ್ಥಿತರಿದ್ದರು.
(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)
Tags:
ಕೆ ಆರ್ ಪೇಟೆ ವರದಿ