ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಹೊಸಸೇತುವೆ ರಸ್ತೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಅಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆ, ಬಿ.ಇಡಿ ಕಾಲೇಜ್ ಮತ್ತು ಕರ್ನಾಟಕ ಲೋಕಾಯುಕ್ತ ಇವರ ಸಹಯೋಗದಲ್ಲಿ ಬುಧವಾರ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ 2024 ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಲೋಕಾಯುಕ್ತ ಇನ್ಸ್ಪೆಕ್ಟರ್ ವೀರಬಸಪ್ಪ ಎಲ್. ಕುಶಲಾಪುರ ಮಾತನಾಡಿ ಸಮಾಜದ ಮುಂದಿನ ಪೀಳಿಗೆಯ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮತ್ತು ಅರಿವು ಮೂಡಿಸುವ ವಿಷಯದಲ್ಲಿ ಹಗರಣಗಳ ಬಗ್ಗೆ ಮಾಹಿತಿ ಮತ್ತು ದೂರು ನೀಡುವ ಪ್ರಕ್ರಿಯೆಗಳು ಮತ್ತು ನ್ಯಾಯದ ಪಾರದರ್ಶಕತೆಯ ತಿಳಿಸಿದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವರದರಾಜ, ಬಿ.ಇಡಿ ಕಾಲೇಜಿನ ಉಪನ್ಯಾಸಕರು, ಉಪನ್ಯಾಸಕ ವೃಂದ, ಪ್ರಶಿಕ್ಷಣಾರ್ಥಿಗಳು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಇಎಸ್ ಸಂಸ್ಥೆಯ ಆಡಳಿತ ಅಧಿಕಾರಿ
ಡಾ.ಎಸ್.ಪಿ.ರಾಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಬಿ.ಇಡಿ ಶಿಕ್ಷಣಾರ್ಥಿ ಪ್ರಥಮ ಪ್ರಾರ್ಥಿಸಿ, ದೈಹಿಕ ಶಿಕ್ಷಕ ಶಿವಲಿಂಗೇಗೌಡರು ಸ್ವಾಗತಿಸಿ, ವಂದಿಸಿದರು, ಉಪನ್ಯಾಸಕಿ ಶೋಭಾ ಹೆಚ್.ವಿ, ನಿರೂಪಿಸಿದರು.