ವಿಜಯ ಸಂಘರ್ಷ ನ್ಯೂಸ್
ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಮತ್ತಿಘಟ್ಟ ಗ್ರಾಮದ ಕುಮಾರ ಎಂಬವರಿಗೆ ಸೇರಿದ ಮೇಕೆಗಳ ಮೇಲೆ ಬೀದಿ ನಾಯಿಗಳು ಅಟ್ಟಹಾಸ ಮೆರೆದ ಪರಿಣಾಮ ಎಂಟು ಮೇಕೆಗಳು ಸ್ಥಳದಲ್ಲೇ ಸಾವಿಗಿಡಾಗಿ ರುವ ಘಟನೆ ನಡೆದಿದೆ.
ಸುದ್ದಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಸಮಾಜ ಸೇವಕ ಆರ್‌ಟಿಓ ಮಲ್ಲಿಕಾರ್ಜುನ್ ಭೇಟಿ ನೀಡಿ ಸ್ಥಳ ಪರಿಶೀಲಿಸಿ ರೈತ ಕುಮಾರ್ ರವರಿಗೆ ಆರ್ಥಿಕ ಧನ ಸಹಾಯ ನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ಮಾನವೀಯತೆ ಮೆರೆದರು.
ಗ್ರಾಮದ ಮುಖಂಡ ಬಸವೇಗೌಡ ಮಾತನಾಡಿ, ಹಲವು ವರ್ಷಗಳಿಂದ ನಮ್ಮ ಗ್ರಾಮದ ಕುಮಾರ್ ಅವರು ಮೇಕೆ ಸಾಗಾಣಿಕೆ ಮಾಡುತ್ತಾ ಜೀವನ ಸಾಗಿಸುತ್ತಿದ್ದರು ಆದರೆ ಬೀದಿ ನಾಯಿಗಳ ಹಾವಳಿಯಿಂದ ಎಂಟು ಮೇಕೆಗಳು ಸಾವಿಗೀಡಾಗಿ ಸಂಕಷ್ಟಕ್ಕೆ ಸಿಲುಕಿರುವ ಕುಮಾರ ಅವರ ಕುಟುಂಬಕ್ಕೆ ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ರವರು ಧನಸಹಾಯ ನೀಡುವ ಮೂಲಕ ಮಾದರಿಯಾಗಿದ್ದಾರೆ. ಅವರ ನಿರಂತರ ಸಮಾಜಮುಖಿ ಕಾರ್ಯಕ್ಕೆ ನಿಜಕ್ಕೂ ಶ್ಲಾಘನೀಯ ಎಂದರು.
ಗ್ರಾಮದಲ್ಲಿ ಪದೇ ಪದೇ ರೈತರ ಜಾನುವಾರು ಗಳು ಬೀದಿ ನಾಯಿಗಳ ಹಾವಳಿಯಿಂದ ರೈತರ ರಾಸುಗಳು ಸಾವಿಗೀಡಾಗುತ್ತಿವೆ ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯೆ ರಮ್ಯ ಸುರೇಶ್,ಮಾಜಿ ಸದಸ್ಯೆ ಲತಾ ವಿಶ್ವನಾಥ್, ಕುಮಾರ್, ಮುಖಂಡರಾದ ಬಸವೇಗೌಡ, ರಾಜೇಗೌಡ, ರಂಗೇಗೌಡ,ಕುಮಾರ್ ಗೌಡ,ಸತೀಶ್, ಗೌರಮ್ಮ, ರಾಜೇಗೌಡ, ಮಹೇಶ್,ರೈತ ಕುಮಾರ್, ಆರ್ ಟಿ ಓ ಮಲ್ಲಿಕಾರ್ಜುನ್ ಅಭಿಮಾನಿಗಳ ಬಳಗದ ಅಧ್ಯಕ್ಷ ಗಂಜಿಗೆರೆ ಮಹೇಶ್ ಸೇರಿದಂತೆ ಅನೇಕರಿದ್ದರು.
(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)
Tags:
ಕೆ ಆರ್ ಪೇಟೆ ವರದಿ