ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಪ್ರಸ್ತುತ ಮಾನವ ಸಮಾಜಕ್ಕೆ ಅಗತ್ಯವಿರುವ ಶ್ರೀ ರಾಮಾಯಣ ಮಹಾ ಗ್ರಂಥ ನೀಡಿರುವ ಮಹರ್ಷಿ ವಾಲ್ಮೀಕಿ ಎಂದಿಗೂ ಅವಿಸ್ಮರಣೀಯ. ಅವರ ಆದರ್ಶ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿ ಕೊಂಡು ಮುನ್ನಡೆಯಬೇಕು ಎಂದು ಚಳ್ಳಕೆರೆ ತಳುಕು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಫೈಜ್ ನಟರಾಜ್ ಹೇಳಿದರು.
ಅವರು ಗುರುವಾರ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾ
ಖೆ, ನಗರಸಭೆ ಹಾಗೂ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟ ನೆಗಳ ವತಿಯಿಂದ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು.
ಈ ಮಾನವ ಸಮಾಜಕ್ಕೆ ಒಂದು ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ನೀಡಿದ ಸಮಾಜ ವಾಲ್ಮೀಕಿ ಸಮಾಜ ವಾಗಿದ್ದು, ಪ್ರತಿಯೊಬ್ಬರ ನಡುವಿನ ಭಾವನೆ ಗಳು,ಮೌಲ್ಯಗಳು, ಸಂಘರ್ಷಗಳಿಗೆ ರಾಮಾಯಣ ಸೂಕ್ತ ಉತ್ತರವಾಗಿದೆ. ಈ ಹಿನ್ನಲೆಯಲ್ಲಿ ಭೂತ ಕಾಲ, ವರ್ತಮಾನ ಹಾಗೂ ಭವಿಷ್ಯಕ್ಕೂ ರಾಮಾಯಣ ಪ್ರಸ್ತುತವಾಗಿದೆ. ರಾಮಾಯಣ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಬೇರೆ ಬೇರೆಯಾಗಿ ನೋಡಲು ಸಾಧ್ಯವಿಲ್ಲ ಎಂದರು.
ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಾಲ್ಮೀಕಿ ಸಮಾಜ ಇನ್ನೂ ಹೆಚ್ಚು ಸಂಘಟಿತ ಗೊಳ್ಳಬೇಕಾಗಿದೆ. ನಗರದಲ್ಲಿ ವಾಲ್ಮೀಕಿ ಸಮು ದಾಯ ಭವನ ನಿರ್ಮಾಣ ವಿಳಂಬವಾಗು ತಿದ್ದು, ಶಾಸಕರು ನೆನೆಗುದಿಗೆ ಬಿದ್ದಿರುವ ಕಾಮಗಾರಿ ಶೀಘ್ರವಾಗಿ ಮುಕ್ತಾಯಗೊಳಿಸಿ ಸಮುದಾಯ ಭವನ ಉದ್ಘಾಟಿಸುವ ವಿಶ್ವಾಸವಿದೆ ಎಂದರು.
ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಅಧ್ಯಕ್ಷ ಮಣಿ ಎಎನ್‌ಎಸ್, ವಾಲ್ಮೀಕಿ ನಾಯಕ ಸಮಾಜದ ತಾಲೂಕು ಅಧ್ಯಕ್ಷರು ಹಾಗೂ ನಗರಸಭಾ ಸದಸ್ಯ ಬಸವರಾಜ್ ಬಿ. ಆನೇಕೊಪ್ಪ, ನಗರಸಭೆ ಸದಸ್ಯರಾದ ಲತಾ ಚಂದ್ರಶೇಖರ್, ಸರ್ವ ಮಂಗಳ ಭೈರಪ್ಪ, ಟಿಪ್ಪು ಸುಲ್ತಾನ್, ಮಂಜುಳ ಸುಬ್ಬಣ್ಣ, ಪರ್ವೇಜ್, ಸೂಡ ಸದಸ್ಯ ಎಚ್. ರವಿಕುಮಾರ್,ತಹಸೀಲ್ದಾರ್ ಕೆ.ಆರ್ ನಾಗರಾಜು, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ
ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸವಿತ, ವಾಲ್ಮೀಕಿ ಸಮಾಜದ ಗೌರವಾ ಧ್ಯಕ್ಷ ಬಸವರಾಜಪ್ಪ, ಪ್ರಧಾನ ಕಾರ್ಯದರ್ಶಿ ಶಿವಾನಂದ, ಮುಖಂಡರಾದ ರಾಜೇಂದ್ರ, ಈಶ್ವರಪ್ಪ, ವಿ. ವಿನೋದ್, ವೆಂಕಟೇಶ್ ಉಜ್ಜನಿಪುರ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿದ್ದರು. ಸಮಾಜ ಕಲ್ಯಾಣ ಇಲಾಖೆ ಶಶಿಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಬಿ.ಎಚ್ ರಸ್ತೆ ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಹಾಗು ಡೊಳ್ಳು ಕುಣಿತ, ವೀರಗಾಸೆ ಕಲಾ ತಂಡ ಗಳೊಂದಿಗೆ ಉತ್ಸವ ಮೆರವಣಿಗೆ ನಡೆಸಲಾಯಿತು. ಕರ್ನಾಟಕ ಗ್ರಾಮೀಣ ಮೂಲಕ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬಿ.ಕೆ ಸಂಗಮೇಶ್ವರ್ ಮೆರವಣಿಗೆಗೆ ಚಾಲನೆ ನೀಡಿದರು.
ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಹಾಗು ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿ ರಸ್ತೆಯಲ್ಲಿ ಸಾಗಿ ಮೆರವಣಿಗೆ ಸಭಾ ಭವನ ತಲುಪಿತು.
Tags:
ಭದ್ರಾವತಿ ವಾಲ್ಮೀಕಿ ಜಯಂತಿ