ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಗಡಿನ ಶೆಡ್ ನಿರ್ಮಾಣದ ವೇಳೆ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ. ತಾಲ್ಲೂಕಿನ ಆನವೇರಿಯ ಸಮೀಪದ ಹನುಮಂತಾಪುರದ ಲಲಿತಾಬಾಯಿ ಕೃಷ್ಣೋಜಿ ರಾವ್ ಅವರ ಮಗ ರಕ್ಷಿತ್ (22) ಮೃತ ದುದೈರ್ವಿ.
ಹನುಮಂತಾಪುರದ ರಕ್ಷಿತ್ ಆನವೇರಿಯ ಕೆ.ಕೆ ರಸ್ತೆಯಲ್ಲಿ ತನ್ನ ಚಿಕ್ಕಪ್ಪನ ಮಗನೊಂದಿಗೆ ಸೇರಿ ಹೊಸದಾಗಿ ಮಿಲ್ಟ್ರೀ ಹೋಟೆಲ್ ಶೆಡ್ ನಿರ್ಮಾಸಿದ್ದಾನೆ. ಶೆಡ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಆಕಸ್ಮಿಕವಾಗಿ 11 ಕೆ.ವಿ ವಿದ್ಯುತ್ ತಂತಿ ತಗುಲಿ ಅಸ್ವಸ್ಥನಾಗಿದ್ದಾನೆ.
ಯುವಕನನ್ನು ಕೂಡಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಷ್ಟರಲ್ಲೆ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹನುಮಂತಾಪುರದ ಲಲಿತಾಬಾಯಿ ಕೃಷ್ಣೋಜಿರಾವ್ ದಂಪತಿಯ ಒಬ್ಬನೆ ಮಗ ರಕ್ಷಿತ್ ಚಿಕ್ಕಪ್ಪನ ಮಗನ ಸಹಭಾಗಿತ್ವದಲ್ಲಿ ಮಿಲ್ಟ್ರೀ ಹೋಟೆಲ್ ನಿರ್ಮಾಣದ ಕನಸು ಕಂಡಿದು ಆನವೇರಿಯಲ್ಲಿ ಖಾಲಿ ಜಾಗ ವೊಂದನ್ನು ಗುತ್ತಿಗೆ ಪಡೆದು ತಗಡಿನ ಶೆಡ್ ನಿರ್ಮಾಣ ಮಾಡಿ ಕೊಂಡು ವಿದ್ಯುತ್ ಸಂಪರ್ಕ ಪಡೆಯುವಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ.
ರಕ್ಷಿತ್‌ಗೆ ಒಬ್ಬಳು ತಂಗಿ ಇದ್ದಾಳೆ. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಗೋಳು ಮುಗಿಲು ಮುಟ್ಟಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tags:
ಭದ್ರಾವತಿ ಗ್ರಾಮಾಂತರ ವರದಿ