ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾದ ಮಲ್ಲಿಕಾರ್ಜುನ ಖರ್ಗೆ, ಒ.ಬಿ.ಸಿ, ಅಲ್ಪಸಂಖ್ಯಾತ ಉಸ್ತುವಾರಿ ಕೆ.ರಾಜು ಎ.ಐ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಲಿಲೋತಿಯ ರವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಧ್ಯಕ್ಷರು ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸಲಹೆ ಮೇರೆಗೆ ರಾಮನಗರ ಜಿಲ್ಲೆ ವ್ಯಾಪ್ತಿಗೆ ಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ-ಚುನಾವಣೆ ಯ-2024 ಉಸ್ತುವಾರಿ ಯಾಗಿ ಕೆ ಪಿ ಸಿ ಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರು ಹಾಗೂ ಕೆಆರ್ಎಂಎಸ್ ರಾಜ್ಯಾಧ್ಯಕ್ಷ ಮಂಜುನಾಥ್. ಎಸ್ ರವರನ್ನು ನೇಮಕ ಮಾಡಿ ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಅಧ್ಯಕ್ಷರಾದ ಆರ್ ಧರ್ಮಸೇನ ಆದೇಶ ಮಾಡಿದ್ದಾರೆ. ತಾವುಗಳು ಪರಿಶಿಷ್ಟಜಾತಿ ಸಮುದಾಯದ ಜನರನ್ನು ಗುರುತಿಸಿ ಅವರನ್ನು ವಿಶ್ವಾಸಕ್ಕೆ ಪಡೆದು ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಬ್ಲಾಕ್ ಕಾಂಗ್ರೇಸ್ ಸಮಿತಿಗಳನ್ನು ರಚಿಸಿ, ಚುನಾವಣೆ ಸಭೆ ನಡೆಸುವುದು, ಪತ್ರಿಕಾ ಗೋಷ್ಟಿಯನ್ನು ನಡೆಸುವುದು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tags:
ಭದ್ರಾವತಿ ಮಂಜುನಾಥ ನೇಮಕ