ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ಸಂಚಾರಿ ಪೊಲೀಸರು ವಾಹನ ತಡೆದು ತಪಾಸಣೆಗೆ ಮುಂದಾದಾಗ ಸಿಬ್ಬಂದಿ ಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ಗುರುವಾರ ಶಿವಮೊಗ್ಗದಲ್ಲಿ ನಡೆದಿದೆ.
ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಹೆಚ್.ರಸ್ತೆ ಯಲ್ಲಿ ವಾಹನ ತಡೆದು ತಪಾಸಣೆ ನಡೆಸುವಾಗ ಘಟನೆ ಸಂಭವಿಸಿದೆ.
ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್ ಸಿಬ್ಬಂದಿ ಕೂಡಲೆ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್ ಮೇಲೆ ಹತ್ತಿದ್ದಾರೆ.
ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೆ ಸಹ್ಯಾದ್ರಿ ಕಾಲೇಜು ಗೇಟ್‌ನಿಂದ ಮತ್ತೂರು ರಸ್ತೆವರೆಗೂ ಸಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
Tags:
ಶಿವಮೊಗ್ಗ ವರದಿ