ಹಿರಿಯರು ಮನೆಗೆ ಆದರ್ಶ ಪ್ರಾಯ: ಬಿ.ಸಿದ್ದಬಸಪ್ಪ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಹಿರಿಯರು ಮನೆಗೆ ಆದರ್ಶ ಪ್ರಾಯ, ಅವರ ಮಾರ್ಗದರ್ಶನ ನಮ್ಮೆಲ್ಲರಿಗೂ ಅತ್ಯಗತ್ಯ ಆದರಿಂದ ಮನೆಯ ಹಾಗೂ ಸಮಾಜ ದಲ್ಲಿರುವ ಹಿರಿಯರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಹೇಳಿದರು. 

ಅವರು ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆ ಬಿ.ಇಡಿ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಇದೇ ವೇಳೆ ನಿವೃತ್ತ ಶಿಕ್ಷಕ ಶಿವಮೂರ್ತಿ ಹಾಗೂ ನಿವೃತ್ತ ಅರಣ್ಯ ಅಧಿಕಾರಿ ಕೆಂಪೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಸನ್ಮಾನಿತರು ಮಾತನಾಡಿ, ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಈ ಸಂಪ್ರದಾಯ ಸಮಾಜಕ್ಕೆ ಮಾದರಿ ಮತ್ತು ಆದರ್ಶಪ್ರಾಯ ಎಂದರು. 

ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಹಾಗೂ ಬಿ.ಇಡಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಪಿ ರಾಕೇಶ್ ಕಾರ್ಯಕ್ರಮ ಉದ್ಘಾಟಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗಗೌಡ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬಿಇಡಿ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು