ಕ್ರೀಡೆಗಳಿಂದ ಉತ್ತಮ ಆರೋಗ್ಯದ ಜೊತೆಗೆ ಮಾನಸಿಕ ಬೆಳವಣಿಗೆ: ಮಣಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಕ್ರೀಡಾ ಚಟುವಟಿಕೆ ಗಳನ್ನು ನಡೆಸಲು ಆರ್ಥಿಕವಾಗಿ ನೆರವು ನೀಡುವುದಾಗಿ ನಗರಸಭೆ ಪ್ರಭಾರ ಅಧ್ಯಕ್ಷ ಎಂ.ಮಣಿ ಎಎನ್‌ಎಸ್ ಭರವಸೆ ನೀಡಿದರು. ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ನಾಡಹಬ್ಬ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಕ್ರೀಡೆಗಳಿಂದ ಉತ್ತಮ ಆರೋಗ್ಯದ ಜೊತೆಗೆ ದೈಹಿಕ ಹಾಗೂ ಮಾನಸಿಕವಾಗಿ ಬೆಳವಣಿಗೆ ಹೊಂದಬಹುದು. ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ತಗಲುವ ಸಂಪೂರ್ಣ ವೆಚ್ಚ ನಾನು ಭರಿಸಲು ಸಿದ್ದವಾಗಿದ್ದೇನೆ ಎಂದರು. 
ದಸರಾ ಮೊದಲ ಬಹುಮಾನ: ಕ್ರಿಕೆಟ್ ಪಂದ್ಯಾವಳಿಯಲ್ಲಿ ನಗರದ ಸರ್.ವಿರ್ಜಾ ಇಸ್ಮಾಯಿಲ್ ಕಟ್ಟಡ ಕಾರ್ಮಿಕರ ಸಂಘದ ತಂಡ ಮೊದಲ ಬಹುಮಾನ ಪಡೆದು ಕೊಂಡಿದೆ. ಕೊನೆಯ ಅಂತಿಮ ಪಂದ್ಯದಲ್ಲಿ ಶಿವಮೊಗ್ಗ ಮಾಚೇನಹಳ್ಳಿ ಮಲ್ನಾಡ್ ಕ್ರಿಕೆಟರ್ಸ್ ತಂಡದ ವಿರುದ್ಧ ಜಯ ಸಾಧಿಸಿ 20 ಸಾವಿರ ರೂ ನಗದು, ಟ್ರೋಫಿ ಹಾಗು ಪ್ರಶಸ್ತಿ ಪತ್ರ ತನ್ನದಾಗಿಸಿಕೊಂಡಿತು. ಉಳಿದಂತೆ ದ್ವಿತೀಯ ಸ್ಥಾನ ಪಡೆದ ಮಲ್ನಾಡ್ ಕ್ರಿಕೆಟರ್ಸ್ ತಂಡ 10 ಸಾವಿರ ರೂ ನಗದು, ಟ್ರೋಫಿ ಹಾಗು ಪ್ರಶಸ್ತಿ ಪತ್ರ ಪಡೆದು ಕೊಂಡಿತು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವ‌ರ್, ನಾಡಹಬ್ಬ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್‌, ತಾಲೂಕು ಬಗರ್‌ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖ‌ರ್, ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್, ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಯುವ ಮುಖಂಡ ವೈ. ನಟರಾಜ್, ಶ್ರೀನಿವಾಸ್ ಸೇರಿದಂತೆ ನಗರಸಭೆ ಹಾಲಿ ಮತ್ತು ಮಾಜಿ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು