ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮಂಡ್ಯದಲ್ಲಿ ಡಿ.20, 21 ಮತ್ತು 22 ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ನಗರಕ್ಕೆ ಆಗಮಿಸಿತು.
ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಗರಸಭೆ ಪ್ರಭಾರ ಅಧ್ಯಕ್ಷ ಎಂ. ಮಣಿ ಎಎನ್‌ಎಸ್‌ರವರು ಕನ್ನಡ ತಾಯಿ ಭುವನೇಶ್ವರಿಗೆ ಮಾಲಾರ್ಪಣೆ ಮಾಡಿದರು.
ನಗರಸಭಾ ಸದಸ್ಯರಾದ ಬಿ.ಟಿ ನಾಗರಾಜ್, ಬಸವರಾಜ ಬಿ. ಆನೇಕೊಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿ ಎಂ. ಗಂಗಣ್ಣ, ಉಪ ತಹಸೀಲ್ದಾರ್ ಮಂಜಾನಾಯ್ಕ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪ್ರಮುಖರಾದ ಕೋಡ್ಲು ಯಜ್ಞಯ್ಯ, ಎಂ.ಇ ಜಗದೀಶ್, ಟಿ.ತಿಮ್ಮಪ್ಪ, ಎಂ.ಎಸ್ ಸುಧಾಮಣಿ, ಗೊಂದಿ ಜಯರಾಂ, ಸತ್ಯ ಭದ್ರಾವತಿ, ಚಿನ್ನಯ್ಯ, ಮಣಿ ಜಿಂಕ್‌ಲೈನ್, ಪ್ರಶಾಂತ್, ಜೆ.ಎನ್ ಬಸವರಾಜಪ್ಪ, ಕೋಗಲೂರು ತಿಪ್ಪೇಸ್ವಾಮಿ, ವಿಶಾಲಾಕ್ಷಿ, ಸುಮತಿ ಕಾರಂತ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Tags:
ಭದ್ರಾವತಿ ಕನ್ನಡ ರಥ ಆಗಮನ