ಅರಳಿಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಾಲ್ಮೀಕಿ ಜಯಂತಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ಅರಳಿಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಗುರುವಾರ ಹಮ್ಮಿಕೊಳ್ಳಲಾಗಿತ್ತು. 

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಮಹಾಕಾವ್ಯ ರಾಮಾಯಣವನ್ನು ರಚಿಸಿ ಜಗತ್ತಿಗೆ ಹಲವು ಆದರ್ಶ, ಮೌಲ್ಯಗಳನ್ನು ಸಾರಿದ ಮಹರ್ಷಿ ವಾಲ್ಮೀಕಿ ಅವರ ಸಮನ್ವಯತೆಯ ವಿಚಾರಗಳು ಸರ್ವಕಾಲಕ್ಕೂ ಸತ್ಯವಾದುದು ಎಂದರು.

ಸಮಿತಿ ಉಪಾಧ್ಯಕ್ಷ ಸುರೇಶ್ ಹಾಗೂ ಸದಸ್ಯರು ಹಾಜರಿದ್ದು ವಾಲ್ಮೀಕಿ ಜಯಂತಿ ಹಾಗೂ ಶಿಕ್ಷಣದ ಕುರಿತು ಮಾತನಾಡಿದರು. ಪ್ರಭಾರಿ ಮುಖ್ಯಶಿಕ್ಷಕ ದಿವಾಕರ್ ಎಂ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 3 ಜನ ವಿದ್ಯಾರ್ಥಿಗಳು ಸರ್ಕಾರದಿಂದ ಕೊಡ ಮಾಡುವ ಲ್ಯಾಪ್ ಟಾಪ್ ಗೆ ಅರ್ಹರಾದ ವಿದ್ಯಾರ್ಥಿಗಳನ್ನು ಮತ್ತು ತರಬೇತು ಗೊಳಿಸಿದ ಎಲ್ಲಾ ನುರಿತ ಶಿಕ್ಷಕ ವೃಂದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. 

ಶಿಕ್ಷಕಿ ಜಾನಕಿ ಉಪನ್ಯಾಸ ನೀಡಿದರು. ಶಿಕ್ಷಕಿ ಮಮತಾ ಸ್ವಾಗತಿಸಿದರೆ, ಶಾಂತಪ್ಪ ಕಾರ್ಯಕ್ರಮ ನಿರೂಪಿಸಿ, ರೇಣುಕಾ ವಂದಿಸಿದರು. ಶಿಕ್ಷಕರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು