ರಾಜ್ಯೋತ್ಸವ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ಮುಂಬರುವ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ನಗರದ ಡಿಎಆರ್ ಮೈದಾನದಲ್ಲಿ ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಡಳಿತ ಕಚೇರಿ ಸಭಾಂಗಣ ದಲ್ಲಿ ಕನ್ನಡ ರಾಜ್ಯೋತ್ಸವ ಸಿದ್ಧತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ -ಸೂಚನೆ ಗಳನ್ನು ನೀಡಿದರು.

ಧ್ವಜಾರೋಹಣಕ್ಕೆ ಅಗತ್ಯ ವ್ಯವಸ್ಥೆಗಳಾದ ಧ್ವಜ, ಧ್ವಜಸ್ತಂಭ, ವೇದಿಕೆ ಅಲಂಕಾರ ಇತ್ಯಾದಿ ವ್ಯವಸ್ಥೆಯನ್ನು ಪಾಲಿಕೆ ಆಯುಕ್ತರು, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ಕೈಗೊಳ್ಳಬೇಕು. ಸ್ವಾಗತ ಕಮಾನು, ಹೂವಿನ ತೋರಣ, ಸತ್ಕಾರ, ಪೂರ್ವ ಸಿದ್ದತೆಯನ್ನು ಸಾರಿಗೆ ಉಪ
ಆಯುಕ್ತರು, ನಿರ್ಮಿತಿ ಕೇಂದ್ರ ಮತ್ತು ಜಿಲ್ಲಾ ಯುವಜನ ಸಬಲೀಕರಣ ಇಲಾಖೆಯವರು ನಿರ್ವಹಿಸಬೇಕು.

ಕೃಷಿ ಇಲಾಖೆ, ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರವಾಸೋ ದ್ಯಮ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶ, ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ,ಪರಿಶಿಷ್ಟ ವರ್ಗಗಳ ಕಲ್ಯಾಧಿಕಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆ, ಕೆಎಸ್ ಆರ್‌ಟಿಸಿ, ಆರೋಗ್ಯ ಇಲಾಖೆಯವರು ಟ್ಯಾಬ್ಲೊಗಳನ್ನು ತಯಾರಿಸಿ ಪ್ರದರ್ಶಿಸುವಂತೆ ಸೂಚಿಸಿದರು.

ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕುವೆಂಪು ರಂಗಮಂದಿರದಲ್ಲಿ ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ, ಪಾಲಿಕೆ ಆಯುಕ್ತರು ನಿರ್ವಹಿಸ ಬೇಕು. ಆಂಬುಲೆನ್ಸ್ ಮತ್ತು ಅಗ್ನಿ ಶಾಮಕ ವಾಹನ ವ್ಯವಸ್ಥೆಯನ್ನು ಜಿಲ್ಲಾ ಸರ್ಜನ್‌ರು ಹಾಗೂ ಜಿಲ್ಲಾ ಅಗ್ನಿ ಶಾಮಕ ದಳ ನಿರ್ವಹಿಸುವಂತೆ ಸೂಚಿಸಿದ ಅವರು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಚೇರಿ ಸಿಬ್ಬಂದಿ ವರ್ಗದವರು ಸಮಾರಂಭಕ್ಕೆ ಹಾಜರಾಗುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್, ಜಿಲ್ಲಾ ಮಟ್ಟದ ಹಾಜರಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು