ವಾಹನ ಅಡ್ಡಗಟ್ಟಿ ಮೊಬೈಲ್-ಹಣ ದೋಚಿದ ಅಪರಾಧಿಗಳಿಗೆ ಜೈಲುಶಿಕ್ಷೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ವ್ಯಕ್ತಿ ಯೊಬ್ಬರನ್ನು ಬೆದರಿಸಿ ನಗದು ಹಣ, ಮೊಬೈಲ್ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಮೂವರು ಅಪರಾಧಿಗಳಿಗೆ 5 ವರ್ಷ 1 ತಿಂಗಳು ಸಾದಾ ಸೆರೆವಾಸ ಶಿಕ್ಷೆ ವಿಧಿಸಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. 

ಶಿವಮೊಗ್ಗ ನಗರದ ನಿವಾಸಿ ಗಳಾದ ಸಯ್ಯದ್ ಇಬ್ರಾಹಿಂ ಅಲಿಯಾಸ್ ರಹಿಲ್(23), ಮೊಹಮ್ಮದ್ ಮುಸ್ತಫಾ (22) ಮತ್ತು ಮೊಹಮ್ಮದ್ ಅಲ್ಲಾಭಕ್ಷಿ (22) ಶಿಕ್ಷೆಗೊಳಗಾದ ಅಪರಾಧಿಗಳು. 

ನಗರದ ಅನ್ವ‌ರ್ ಕಾಲೋನಿಯ ನಿವಾಸಿ ಮೊಹಮ್ಮದ್ ಖಾಲೀದ್ (21) ಬೈಪಾಸ್ ರಸ್ತೆ ಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿ ದಾಗ ತಡೆದು ಅಡ್ಡಗಟ್ಟಿ ಬೆದರಿಕೆ ಹಾಕಿ ನಗದು ಹಣ, ಮೊಬೈಲ್ ಮತ್ತು ವಾಚ್ ಕಿತ್ತು ಕೊಂಡು ಪರಾರಿಯಾಗಿದ್ದರು. 

ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ತನಿಖಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್‌ರವರು ವಿಚಾರಣೆ ನಡೆಸಿ ಆರೋಪ ದೃಢಪಟ್ಟ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಪಿ.ರತ್ನಮ್ಮ ಪ್ರಕರಣದಲ್ಲಿ ವಾದಮಂಡಿಸಿದ್ದರು.

1 ಕಾಮೆಂಟ್‌ಗಳು

ನವೀನ ಹಳೆಯದು