ಭದ್ರಾವತಿ-ಇಸ್ಪೀಟ್ ಅಡ್ಡೆ ಮೇಲೆ ದಾಳಿ:ಪ್ರಕರಣ ದಾಖಲು

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.

ಹಳೇನಗರದ ಪೊಲೀಸ್ ಠಾಣೆ ಸಿಬ್ಬಂದಿ ಪ್ರಪುಲ್ ಕುಮಾರ್‌ರವರು ನ.17ರಂದು ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಜಟ್‌ಪಟ್ ನಗರದ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ 6 ಜನರ ತಂಡ ಇಸ್ಪೀಟ್ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು