ವಿಜಯ ಸಂಘರ್ಷ ನ್ಯೂಸ್
ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಹೇಮಗಿರಿ ಬಿಜಿಎಸ್ ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಡಾ:ಜೆ.ಎನ್ ರಾಮಕೃಷ್ಣೇಗೌಡರ ಮಾರ್ಗದರ್ಶನದ ಮೇರೆಗೆ ಹೇಮಗಿರಿ ಬಿಜಿಎಸ್ ಶಾಲಾವರಣದಲ್ಲಿ ನಡೆದ ಮಕ್ಕಳ ಸಂತೆಮೇಳ ನೆರವೇರಿತು. ಮೇಳದಲ್ಲಿ ವಿದ್ಯಾರ್ಥಿಗಳು ಹಣ್ಣು, ತರಕಾರಿ, ಹೂವು, ತಿಂಡಿ ಪದಾರ್ಥ ಗಳನ್ನು ಮಾರಾಟ ಮಾಡಿ ತಮ್ಮ ವ್ಯಾಪಾರ ಕೌಶಲ್ಯ ಪ್ರದರ್ಶಿಸಿ ಸಡಗರಪಟ್ಟರು.
ಸಂತೆ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಬಿಜಿಎಸ್ ಶಿಕ್ಷಣ ಸಂಸ್ಥೆ ಎಂದರೆ ಒಂದು ವಿಶೇಷ ಹಾಗೂ ಸಂಸ್ಕಾರ ಸಾಂಸ್ಕೃತಿಕ ಕಣಜ.ಪ್ರಾಥಮಿಕ ಹಂತದಲ್ಲೇ ವಿದ್ಯಾರ್ಥಿಗಳ ಜಾಣ್ಮ ಯನ್ನು ಗುರುತಿಸಲು ಶಾಲೆಯಲ್ಲಿ ನಡೆಯುವ ಮಕ್ಕಳ ಸಂತೆ ಸಹಕಾರಿ ಯಾಗಲಿದೆ.ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಹತೆಗೆ ಸಹಪಠ್ಯ ಚಟುವಟಿಕೆಗಳನ್ನು ನಡೆಸುವುದರಿಂದ ಅವರ ಬೌದ್ಧಿಕ ಜ್ಞಾನ ವಿಕಾಸ ಮತ್ತು ವ್ಯಕ್ತಿತ್ವ ರೂಪುಗೊಳ್ಳುವುದಕ್ಕೆ ಮಕ್ಕಳ ಸಂತೆ ಸಹಕಾರಿ.ಅಂದರೆ ಮಕ್ಕಳಲ್ಲಿ ಲೆಕ್ಕಾಚಾರ ಪ್ರವೃತ್ತಿ ಹಾಗೂ ಗ್ರಾಹಕ ರೊಂದಿಗೆ ವರ್ತಿಸುವ ವ್ಯವಹಾರ ಜ್ಞಾನ ಹೆಚ್ಚುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ: ಜೆ.ಎನ್ ರಾಮಕೃಷ್ಣೇಗೌಡ ಹಲವು ವರ್ಷದಿಂದ ನಮ್ಮ ವ್ಯಾಪ್ತಿಯ ಬಿಜಿಎಸ್ ಶಾಲೆ ಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ ವನ್ನು ಆಯೋಜಿಸುತ್ತಿದ್ದೇವೆ. ಮಕ್ಕಳು ತುಂಬ ಉತ್ಸಾಹದಿಂದ ಮನೆ ಯಿಂದಲೇ ತಿಂಡಿ ತಿನಿಸುಗಳನ್ನು ಮಾಡಿಕೊಂಡು ಬಂದು ಮಾರಾಟ ಮಾಡುತ್ತಿದ್ದಾರೆ. ಆಹಾರ ಹೇಗೆ ತಯಾರು ಮಾಡಬೇಕು, ಅದಲ್ಲಿರುವ ಪೌಷ್ಟಿಕಾಂಶಗಳ ಬಗ್ಗೆ ತಿಳಿವಳಿಕೆ, ಶುಚಿ-ರುಚಿಯ ಬಗ್ಗೆ ತಿಳಿಸುವುದೆ ಈ ಕಾರ್ಯಕ್ರಮದ ಉದ್ದೇಶ ಎಂದರು.
ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ವಿವಿಧ ರೀತಿಯ ತಿಂಡಿ ತಿನಿಸುಗಳು, ತರಕಾರಿಗಳು ಹಾಗೂ ಇತರ ಪದಾರ್ಥ ಗಳನ್ನು ಮಾರಾಟ ಮಾಡಿ ಸಂಭ್ರಮಿಸಿ ದರು.ಪಾಲಕರು ಮಕ್ಕಳು ತಯಾರಿಸಿದ ಪದಾರ್ಥಗಳ ರುಚಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತರಕಾರಿ, ತಂಪು ಪಾನೀಯ, ಪಾನಿಪುರಿ, ಬೇಲ್ ಪುರಿ, ಸೊಪ್ಪು ಇತರ ಪದಾರ್ಥಗಳನ್ನು ಮಾರಾಟ ಮಾಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯ ಶ್ರೀನಿವಾಸ್ ಸಜ್ಜನ್, ಪುರಸಭಾ ಮಾಜಿ ಸದಸ್ಯ ಕೆ. ಆರ್.ನೀಲಕಂಠ, ಕಸಾಪ ಮಾಜಿ ಅಧ್ಯಕ್ಷ ಹರಿಚರಣ್ ತಿಲಕ್,ಮುಖಂಡ ಬೀರುವಳ್ಳಿ ನವೀನ್, ಕುಂದನಹಳ್ಳಿ ಜಗದೀಶ್, ಸುರೇಶ, ಆರ್ ಟಿ ಓ ಮಲ್ಲಿಕಾರ್ಜುನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಗಂಜೀಗೆರೆ ಮಹೇಶ್, ರಘು, ಸೈಯದ್ ಕಲಿಲ್ ಶಾಲಾ ಮಕ್ಕಳು ಸೇರಿದಂತೆ ಉಪಸ್ಥಿತರಿದ್ದರು.
(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)
Tags:
ಕೆ ಆರ್ ಪೇಟೆ ವರದಿ