ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲೂಕಿನ ಬಾರಂದೂರು
ಗ್ರಾ ಪಂ ಯಲ್ಲಿ ತೆರವಾಗಿದ್ದ 1 ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಕಿರಣ್ ಗೆಲುವು ಸಾಧಿಸಿದ್ದಾರೆ.
ಹಿಂದಿನ ಸದಸ್ಯ ಗೋಪಾಲ್ ಬರ್ಗೆ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಒಟ್ಟು 4ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನ.23 ರಂದು ಮತದಾನ ನಡೆದಿದ್ದು, ಕಿರಣ್ 217 ಮತಗಳನ್ನು ಪಡೆದುಕೊಂಡಿದ್ದು, ಒಟ್ಟು 1170 ಮತಗಳಲ್ಲಿ 826 ಮತಗಳು ಚಲಾವಣೆ ಯಾಗಿದ್ದವು.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಿರಣ್‌ರವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.