ಪಿಎಲ್ ಡಿ ಬ್ಯಾಂಕ್‌ ಅಧ್ಯಕ್ಷ ರಾಗಿ ಬಿ.ಆರ್ ಶಿವಕುಮಾರ್ ಅವಿರೋಧ ಆಯ್ಕೆ

ವಿಜಯ ಸಂಘರ್ಷ ನ್ಯೂಸ್ 
ಕೆ.ಆರ್.ಪೇಟೆ: ಪ್ರಾಥಮಿಕ ಸಹಕಾರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಂಡಿಹೊಳೆ ಬಿ ಆರ್ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷರಾಗಿದ್ದ ರಾಧ ಈಶ್ವರಪ್ರಸಾದ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗಧಿಯಾಗಿತ್ತು. ಅಧ್ಯಕ್ಷ ಸ್ಥಾನ ಬಯಸಿ ಬಿ.ಆರ್ ಶಿವಕುಮಾರ್ ಅವರನ್ನು ಬಿಟ್ಟರೆ ಉಳಿದ ಯಾವ ಸದಸ್ಯರು ತಮ್ಮ ಉಮೇದುವಾರಿಕೆ ಯನ್ನು ಸಲ್ಲಿಸದ ಕಾರಣ ನೂತನ ಅಧ್ಯಕ್ಷರಾಗಿ ಬಂಡಿಹೊಳೆ ಶಿವಕುಮಾರ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಭರತ್ ಘೋಷಿಸಿದರು. ಸಹ ಚುನಾವಣಾಧಿಕಾರಿಗಳಾಗಿ ಬ್ಯಾಂಕ್ ಮ್ಯಾನೇಜರ್ ರವಿಕುಮಾರ್ ಕಾರ್ಯನಿರ್ವಹಿಸಿದರು.

ನೂತನ ಅಧ್ಯಕ್ಷರನ್ನಾಗಿ ಮಾತನಾಡಿದ ಬ್ಯಾಂಕ್ ಮಾಜಿ ಅಧ್ಯಕ್ಷ ಕಬ್ಬಲಗೆರೆಪುರ ಪುಟ್ಟಸ್ವಾಮಿಗೌಡ ಅಧ್ಯಕ್ಷರಾದವರಿಗೆ ಜವಾಬ್ದಾರಿ ಹೆಚ್ಚಿರುತ್ತದೆ. ಬ್ಯಾಂಕ್ ನ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬ್ಯಾಂಕ್ ಅಭಿವೃದ್ಧಿಗೆ ಶ್ರಮಿಸಬೇಕು.ಈಗಿನ ಅಧ್ಯಕ್ಷರಿಗೆ ಅನೇಕ ಸವಾಲುಗಳು ಅವರ ಮುಂದಿವೆ.ನೂತನವಾಗಿ ನಿರ್ಮಾಣ ವಾಗುತ್ತಿರುವ ಬ್ಯಾಂಕ್ ಕಟ್ಟಡ ಪ್ರಗತಿ ಹಂತದಲ್ಲಿದೆ.ಅದನ್ನು ಪೂರ್ಣಗೊಳಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳ ಬೇಕಾಗುತ್ತದೆ. ತಾಲ್ಲೂಕಿನ ರೈತರಿಗೆ ನೀಡಿರುವ ಸಾಲವನ್ನು ಮರುಪಾವತಿ ಮಾಡಲು ಯೋಜನೆಯನ್ನು ರೂಪಿಸಕೊಳ್ಳಬೇಕು. ನಾವೆಲ್ಲರೂ ನಿಮ್ಮ ಜೊತೆಗೆ ಇರುತ್ತೇವೆ‌. ಒಟ್ಟಿನಲ್ಲಿ ಬ್ಯಾಂಕ್ ಸರ್ವಾಂಗೀಣ ಅಭಿವೃದ್ಧಿ ಹಾಗೂ ರೈತರ ಹಿತ ಕಾಯಲು ಕಂಕಣ ಬದ್ದರಾಗಿ ದುಡಿಯುವಂತೆ ನೂತನ ಅಧ್ಯಕ್ಷರಿಗೆ ಕಿವಿಮಾತು ಹೇಳಿದರು.

ನೂತನ ಅಧ್ಯಕ್ಷ ಬಂಡಿಹೊಳೆ ಶಿವಕುಮಾರ್ ಅಭಿನಂದನೆ ಸ್ವೀಕರಿಸಿ ಮಾತನಾಡಿ ನನ್ನ ಮೇಲೆ ವಿಶ್ವಾಸವಿಟ್ಟು ಬಹು ದೊಡ್ಡ ಜವಾಬ್ದಾರಿ ಸ್ಥಾನ ಅಧ್ಯಕ್ಷ ಸ್ಥಾನವನ್ನು ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ ನಮ್ಮ ಬ್ಯಾಂಕ್ ನ ಎಲ್ಲಾ ಸದಸ್ಯರು ಪಕ್ಷಾತೀತವಾಗಿ ನನ್ನನ್ನು ಗುರುತಿಸಿ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಅನಂತ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನಗೆ ಕೊಟ್ಟ ಜವಾಬ್ದಾರಿ ಸ್ಥಾನಕ್ಕೆ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಕಾರ್ಯವನ್ನು ನಿರ್ವಹಿಸುತ್ತೇನೆ.ಎಲ್ಲರನ್ನೂ ವಿಶ್ವಾಸಕ್ಕೆ ಪಾತ್ರನಾಗಿ ಉಳಿದಿರುವ ಅವಧಿಯಲ್ಲಿ ಬ್ಯಾಂಕ್ ಅಭಿವೃದ್ಧಿ ಹಾಗೂ ರೈತರ ಬೆನ್ನೆಲುಬಾಗಿ ಪ್ರಾಮಾಣಿಕವಾಗಿ ದುಡಿಯಲು ಪ್ರಯತ್ನವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ನೂತನ ಅಧ್ಯಕ್ಷರನ್ನು ಬ್ಯಾಂಕ್ ನ ಮಾಜಿ‌ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ
ನಿರ್ದೇಶಕರು ಹಾಗೂ ನೌಕರರು ಮತ್ತು ಹಿರಿಯ ಮುಖಂಡರು ‌ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಉಪಾಧ್ಯಕ್ಷ ಏಜಾಜ್ ಪಾಷಾ,ಮಾಜಿ‌ ಅಧ್ಯಕ್ಷರಾದ ರಾಧಾ ಈಶ್ವರಪ್ರಸಾದ್,ಕಟ್ಟೆಕ್ಯಾತನಹಳ್ಳಿ ಅಂಜನಿಗೌಡ,ಅಗಸರಹಳ್ಳಿ ಗೋವಿಂದರಾಜು,ಮಾಜಿ‌ ಉಪಾಧ್ಯಕ್ಷ ಬಣ್ಣೇನಹಳ್ಳಿ ಧನಂಜಯ, ಕಾಂತಾರಾಜೇ ಗೌಡ,ಚಂದ್ರೇಗೌಡ,ನಾಗರಾಜೇಗೌಡ,ಕಮಲಮ್ಮ, ಜಯಶೀಲ,ನಾಗೇಶ್, ನಾಮಿನಿ ನಿರ್ದೇಶಕ ಚಂದ್ರೇಗೌಡ, ಶಂಭುಲಿಂಗೇಗೌಡ, ರಾಜಾನಾಯ್ಕ,ಬ್ಯಾಂಕ್ ಮ್ಯಾನೇಜರ್ ರವಿಕುಮಾರ್, ಗ್ರಾ.ಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ದರ್ಶನ್,ಬಂಡಿಹೊಳೆ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಬಂಡಿಹೊಳೆ ಹರೀಶ್,ಗ್ರಾ.ಪಂ ಮಾಜಿ ಸದಸ್ಯ ಕುಪ್ಪಹಳ್ಳಿ ಶೇಷಾದ್ರಿ, ಸಿಂಚನ ವಿಜಯ್ ಕುಮಾರ್,ಕಾಯಿ ಮಂಜೇಗೌಡ, ಕುಪ್ಪಹಳ್ಳಿ ಪ್ರಕಾಶ್, ಪ್ರದೀಪ್, ಬಂಡಿಹೊಳೆ ರಾಘು,ಸೇರಿದಂತೆ ಉಪಸ್ಥಿತರಿದ್ದರು.

*✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ*

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು