ವಕ್ಫ್ ಹೆಸರಲ್ಲಿ ಸಾರ್ವಜನಿಕ ಆಸ್ತಿ ಕಬಳಿಕೆ ನಿಲ್ಲಲ್ಲಿ: ಬಿಜೆಪಿ ಆಗ್ರಹ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ರಾಜ್ಯಾದ್ಯಂತ ವಕ್ಫ್ ಮಂಡಳಿಯು ಬಡರೈತರ ಮತ್ತು ಸಾರ್ವಜನಿಕರ ಆಸ್ತಿ ಕಬಾಳಿಸಲು ಹೊರಟಿರುವುದು ತಕ್ಷಣದಿಂದ ನಿಲ್ಲಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಸೋಮವಾರ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಶಾಂತವಾದ ಕರ್ನಾಟಕದಲ್ಲಿ ಸದ್ದಿಲ್ಲದೆ ನೂರಾರು ವರ್ಷಗಳಿಂದ ಜಮೀನು ಸಾಗುವಳಿ ಮಾಡಿಕೊಂಡು ಬಂದಿರುವ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿಯೆಂದು ನಮೂದಿಸಿ ರೈತರಿಗೆ ನೋಟೀಸ್ ನೀಡುತ್ತಿರುವ ಸರ್ಕಾರ ರಾಜ್ಯದ ಮುಜುರಾಯಿ ದೇವಾಲಯಗಳು, ಪುರಾತತ್ವ ಇಲಾಖೆಯ ಆಸ್ತಿಗಳು, ಮಠ ಮಂದಿರಗಳು ಮತ್ತು ಶಾಲಾ ಜಮೀನುಗಳನ್ನು ವಕ್ಫ್ ಆಸ್ತಿ ಮಾಡಲು ಸರ್ಕಾರ ಹೊರಟಿದೆ. ಇದಕ್ಕೆ ಮುಖ್ಯ ಕಾರಣ ವಸತಿ ಸಚಿವ ಜಮೀರ್ ಅಹಮ್ಮದ್ ಆಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು, ಸಂಪುಟದಿಂದ ವಜಗೊಳಿಸಬೇಕು ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ದೊಡ್ಡ ಮಟ್ಟದ ಹೋರಾಟ ಬಿಜೆಪಿ ನಡೆಸಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಲುಬಿಲ್ಲದ ನಾಲಿಗೆ ನಿಮ್ಮದು ನೋಟೀಸ್ ಹಿಂಪಡೆದ ತಕ್ಷಣ ಪಹಣಿಯಲ್ಲಿ ಬದಲಾವಣೆ ಯಾಗುವುದಿಲ್ಲ. ತಾಕತ್ತಿದ್ದರೆ ವಕ್ಫ್ ಕಾನೂನನ್ನೇ ಬದಲಾವಣೆ ಮಾಡಿ,ನಮ್ಮ ಕಾನೂನುಬದ್ಧ ಹೋರಾಟವನ್ನು ತಡೆಯುವ ದುಸ್ಸಾಹಕ್ಕೆ ಕೈಹಾಕಬೇಡಿ ಎಂದು ಪ್ರತಿಭಟನಾ ಕಾರರು ದೂರಿದರು. 

ಬಿಜೆಪಿ ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಪ್ರತಿಭಟನಾ ನೇತೃತ್ವ ವಹಿಸಿದ್ದರು. ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಎಂ. ಮಲ್ಲೇಶ್, ಮಾಧ್ಯಮ ಪ್ರಮುಖ್ ಕಾ.ರಾ. ನಾಗರಾಜ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು