ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಸರ್ಕಾರಿ ಶಾಲೆಯ ಮಕ್ಕಳು ಆರ್ಥಿಕವಾಗಿ ಹಿಂದುಳಿದ ಮಕ್ಕಳಾಗಿ ರುತ್ತಾರೆ. ಅವರ ಶಿಕ್ಷಣಕ್ಕೆ ಪೂರಕ ವಾಗುವ ಸಾಮಾಜಿಕ ಕಾರ್ಯಕ್ರಮ ಗಳನ್ನು ಸಂಘ ಸಂಸ್ಥೆಗಳ ಮೂಲಕ ಹಮ್ಮಿಕೊಳ್ಳುವುದು ಕರ್ತವ್ಯ ವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ.ವಿನೋದ್ ಹೇಳಿದರು.
ಅವರು ಚನ್ನಗಿರಿ ರಸ್ತೆಯ ಶ್ರೀ ಗಂಗಾ ಪರಮೇಶ್ವರಿ ಸಮುದಾಯ ಭವನದಲ್ಲಿ ಪ್ರಿಯಾಂಕ ಖರ್ಗೆ ಅಭಿಮಾನಿಗಳ ಬಳಗದ ವತಿಯಿಂದ ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ರವರ ಹುಟ್ಟು ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 250ಕ್ಕೂ ಹೆಚ್ಚು ಮಕ್ಕಳಿಗೆ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ತರೀಕೆರೆ ಎಆರ್ ಟಿ ಓ ಎನ್. ಮಂಜುನಾಥ್ ಮಾತನಾಡಿ, ಶಿಕ್ಷಣಕ್ಕೆ ಹೆಚ್ಚು ಆದ್ಯತೆ ಕೊಡುತ್ತಾರೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಪೂರಕವಾಗಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ವಿತರಣೆ ಹಾಗೂ ಲೇಖನ ಸಾಮಗ್ರಿ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರು ವುದರ ಕುರಿತು ಹರ್ಷ ವ್ಯಕ್ತಪಡಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯು.ಮಹದೇವಪ್ಪ, ಕರ್ನಾಟಕ ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಆರ್. ರೇವಣ್ಣಪ್ಪ ನಿವೃತ್ತ ಮುಖ್ಯ ಶಿಕ್ಷಕ ಕರಿಯಪ್ಪ ಡಿ. ದಲಿತ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚನ್ನಪ್ಪ ಮತ್ತಿತರರು ಭಾಗವಹಿಸಿದ್ದರು.
ಪ್ರಿಯಾಂಕ ಖರ್ಗೆ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಆದರ್ಶ ಸಿ ಪಾಟೀಲ್ ಪ್ರಧಾನ ಕಾರ್ಯದರ್ಶಿ ಸುನಿಲ್ ಕೋಠಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರು.
ಆರಂಭದಲ್ಲಿ ರೇವಣ್ಣಪ್ಪ ಜನಪದ ಕ್ರಾಂತಿ ಗೀತೆ ಹಾಡಿದರು, ಜಯಪ್ಪ ಸ್ವಾಗತಿಸಿ, ಸುಶೀಲಮ್ಮ ವಂದಿಸಿದರೆ ಸುರೇಶ್ ಕಾರ್ಯಕ್ರಮ ನಿರೂಪಿಸಿ ದರು. ಭೂತನ ಗುಡಿ ಶಾಲೆಯ ಮುಖ್ಯ ಶಿಕ್ಷಕ ಹಿರೇಮಠ, ಶಿಕ್ಷಕರಾದ ಪ್ರಕಾಶ್, ಸುಜಾತ ಮೀನಾಕ್ಷಮ್ಮ ಇದ್ದರು.
Tags
ಭದ್ರಾವತಿ ನ್ಯೂಸ್