ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲ್ಲೂಕಿನ ಮಾರಶೆಟ್ಟಹಳ್ಳಿ ಗ್ರಾ ಪಂ ತಟ್ಟೆಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಗ್ರಾಮದ ದಿಟ್ಟ ಮಹಿಳೆಯರ ಪಡೆ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಕೆ ಆರ್ ಎಸ್ ಪಕ್ಷ ಹಾಗೂ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿತ್ತು.
ಕೆ ಆರ್ ಎಸ್ ಪಕ್ಷದ ಮುಖಂಡ ತೀರ್ಥ ಮಾತನಾಡಿ, ಗ್ರಾಮದಲ್ಲಿ ಮದ್ಯ ಮಾರಾಟಕ್ಕೆ ಅವೈಜ್ಞಾನಿಕವಾಗಿ ಪರವಾನಿಗೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ಪರವಾನಿಗೆ ರದ್ದು ಪಡಿಸಿ ಗ್ರಾಮದಲ್ಲಿ ಶಾಂತಿ ನೆಲೆಸಲು ಮುಂದಾಬೇಕು ಎಂದರು.
ನಂತರ ಪಕ್ಷದ ವತಿಯಿಂದ ಅಬಕಾರಿ ಡಿಸಿ ಅವರಿಗೆ ದೂರು ನೀಡಿ ಸಂಪೂರ್ಣ ಮದ್ಯ ಮಾರಾಟ ನಿಷೇಧಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆ ಆರ್ ಎಸ್ ಪಕ್ಷದ ಪ್ರಮುಖರು, ದಸಂಸ ಮುಖಂಡರು ಹಾಗೂ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.