ಅಗ್ನಿಶಾಮಕ ಇಲಾಖೆ ತಂಡದಿಂದ ಕಾಲು ಜಾರಿ ನದಿಗೆ ಬಿದ್ದ ಯುವಕನ ರಕ್ಷಣೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಭದ್ರಾ ನದಿಯ ಹೊಸ ಸೇತುವೆ ಮೇಲಿಂದ ಆಯ ತಪ್ಪಿ ನದಿಗೆ ಬಿದ್ದ ಯುವಕನನ್ನು ಅಗ್ನಿಶಾಮಕ ಇಲಾಖೆ ತಂಡ ರಕ್ಷಿಸಿರುವ ಘಟನೆ ಭಾನುವಾರ ನಡೆದಿದೆ. 
    
ನಗರದ ಬೈಪಾಸ್ ರಸ್ತೆ, ಆನೆಕೊಪ್ಪ ಪಂಪ್ ಹೌಸ್ ಸಮೀಪದ ಸೇತುವೆ ಮೇಲೆ ದುರ್ಘಟನೆ ನಡೆದಿದ್ದು, ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳ ನ್ನೊಳಗೊಂಡ ತಂಡದ ಯಶಸ್ವಿ ಕಾರ್ಯಾಚರಣೆಯಿಂದಾಗಿ ಪವನ್ (25) ಪ್ರಾಣಾಪಾಯದಿಂದ ಪಾರಾಗಿದ್ದಾನೆ. 
  
ಕಾರಿನಲ್ಲಿ ಬೆಂಗಳೂರಿಗೆ ತೆರಳಲು ಹೊಸದಾಗಿ ನಿರ್ಮಾಣಗೊಂಡಿರುವ ಸೇತುವೆ ಮೇಲೆ ಬೆಳಗಿನ ಜಾವ ಕಾರು ನಿಲ್ಲಿಸಿ ಪೂಜೆ ಸಲ್ಲಿಸಲುಮುಂದಾಗಿದ್ದು, ಈ ಸಂದರ್ಭದಲ್ಲಿ ಕತ್ತಲೆ ಇದ್ದ ಕಾರಣ ಸೇತುವೆ ಒಂದು ಬದಿಯಲ್ಲಿ ನಿಂತಿದ್ದ ಪವನ್ ಆಕಸ್ಮಿಕವಾಗಿ ಕಾಲು ಜಾರಿ ಸೇತುವೆ ಯಿಂದ ನದಿಗೆ ಬಿದ್ದಿದ್ದಾನೆ. ಜೊತೆಯಲ್ಲಿದ್ದ ವರು ತಕ್ಷಣ ಆಗ್ನಿ ಶಾಮಕ ಇಲಾಖೆಗೆ ಕರೆ ಮಾಡಿದ್ದಾರೆ. 

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ತಂಡ ಸುಮಾರು 1 ಗಂಟೆ ನಿರಂತರ ಕಾರ್ಯಾಚರಣೆ ನಡೆಸಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಪವನ್ ನದಿಗೆ ಬಿದ್ದ ಸ್ಥಳದಲ್ಲಿ ಹೆಚ್ಚಿನ ನೀರು ಇಲ್ಲದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. 

ತಕ್ಷಣ ಆಂಬ್ಯುಲೆನ್ಸ್ ನೆರವಿನೊಂದಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ ಇಲಾಖೆ ಠಾಣಾಧಿಕಾರಿ ವಸಂತಕುಮಾರ್, ಸಿಬ್ಬಂದಿ ಗಳಾದ ಬಾಬು ಎಸ್.ಗೌಡ, ಪಿ. ಮಂಜುನಾಥ್, ಬಾಬಲು ಮಾನಿಕ ಬಾಯ್, ಪ್ರಜ್ವಲ್, ಉದಯ್, ಹಿರೇಮಠ್ ಮತ್ತಿತರರು 
ಪಾಲ್ಗೊಂಡಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು