ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲೂಕಿನ ಸುಣ್ಣದ ಹಳ್ಳಿ ಮಾರುತಿ ನಗರ ಬಸಾಪುರ ನಿವಾಸಿ, ನಗರಸಭೆ ಮಾಜಿ ಸದಸ್ಯ ಆರ್.ಚಿನ್ನಪ್ಪ(63) ಗುರುವಾರ ನಿಧನ ಹೊಂದಿದರು.
ಪತ್ನಿ, ಪುತ್ರ ಹಾಗು ಪುತ್ರಿ ಇದ್ದರು. ಇವರ ಅಂತ್ಯಕ್ರಿಯೆ ನಗರದ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಚಿನ್ನಪ್ಪ ಹಿರಿಯ ಛಾಯಾ ಗ್ರಾಹಕರಾಗಿ, ಆಟೋ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಗರಸಭೆ ಸಮೀಪದ ಶ್ರೀ ನೇತಾಜಿ ಸುಭಾಷ್‌ಚಂದ್ರ ಬೋಸ್ ಆಟೋ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಇವರ ನಿಧನಕ್ಕೆ ಶ್ರೀ ನೇತಾಜಿ ಸುಭಾಷ್‌ಚಂದ್ರ ಬೋಸ್ ಆಟೋ ಚಾಲಕರ ಸಂಘ, ನಗರಸಭೆ ಹಾಲಿ ಮತ್ತು ಮಾಜಿ ಸದಸ್ಯರು, ಛಾಯಾಗ್ರಾಹಕರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
Tags:
ಅಗಲಿದ ಜೀವ