ಕುಮಾ‌ರ್ ಭದ್ರಾವತಿ ರವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಾಡು,ನುಡಿ,ಕಲೆ,ಸಾಹಿತ್ಯ, ಜನಪದ ಮತ್ತು ಸಮಾಜದ ಸೇವೆ ಯಲ್ಲಿ ತೊಡಗಿಸಿಕೊಂಡಿರುವ ಕಲಾಭೂಮಿ ಪ್ರತಿಷ್ಠಾನದ ವತಿಯಿಂದ ನೀಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ನಗರದ ಜನ್ನಾಪುರ ನಿವಾಸಿ ಕುಮಾ‌ರ್ ಭದ್ರಾವತಿರವರಿಗೆ ಲಭಿಸಿದೆ.

ಗ್ರಂಥಾಲಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರ್‌ರವರು ಸಾಹಿತ್ಯ ಹಾಗು ರಂಗಭೂಮಿ ಕ್ಷೇತ್ರ ದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಯನ್ನು ನೀಡ ಲಾಗಿದೆ. ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಛಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಕುಮಾ‌ರ್ ಅವರನ್ನು ಸಿದ್ಧರೂಢ ನಗರದ ಡಾ. ಪುನೀತ್ ರಾಜ್‌ಕುಮಾ‌ರ್ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

1 ಕಾಮೆಂಟ್‌ಗಳು

  1. ಆತ್ಮೀಯ ಗೆಳೆಯ ಕುಮಾರ್ ಭದ್ರಾವತಿ ಅವರ ಸಾಧನೆ ಅನನ್ಯ, ಇನ್ನೂ ಅನೇಕ ಪ್ರಶಸ್ತಿ ಪುರಸ್ಕಾರಗಳು ಅವರ ಮುಡಿಗೇರಲಿ

    ಪ್ರತ್ಯುತ್ತರಅಳಿಸಿ
ನವೀನ ಹಳೆಯದು