ಭದ್ರಾವತಿ-ಯೋಗ ಶಿಕ್ಷಕ ಡಿ. ನಾಗರಾಜ್‌ ರವರಿಗೆ ಪ್ರೋತ್ಸಾಹ ಧನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ:ಅಂತರಾಷ್ಟ್ರೀಯ ಯೋಗಪಟು, ಯೋಗ ಕೇಂದ್ರದ ಯೋಗ ಶಿಕ್ಷಕ ಡಿ. ನಾಗರಾಜ್‌ರವರ ಸಾಧನೆಯನ್ನು ಪ್ರಶಂಸಿ ನಗರಸಭೆ ಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಿ ಗೌರವಿಸಲಾಯಿತು.
ಡಿ. ನಾಗರಾಜ್‌ರವರು ಸುಮಾರು 4 ದಶಕ ಗಳಿಂದ ಯೋಗ ಕ್ಷೇತ್ರದಲ್ಲಿ ತೊಡಗಿಸಿ ಕೊಂಡಿದ್ದು, ಅಂತರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿ ಬಿರುದು ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರನ್ನು ರಾಜ್ಯ ಸರ್ಕಾರ, ಜಿಲ್ಲಾಡಳಿತ, ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ-ಸಂಸ್ಥೆ ಗಳು ಸನ್ಮಾನಿಸಿ ಗೌರವಿಸಿವೆ. 

ಇವರ ಸಾಧನೆಯನ್ನು ಪ್ರಶಂಸಿಸಿ ನಗರಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಲಾಯಿತು.

ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ಕಾಂಗ್ರೆಸ್ ಹಿಂದುಳಿದ ವಿಭಾಗಗಳ ತಾಲೂಕು ಅಧ್ಯಕ್ಷ ಬಿ. ಗಂಗಾಧರ್, ನಗರಸಭೆ ಹಿರಿಯ ಸದಸ್ಯ ವಿ.ಕದಿರೇಶ್ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು