ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ನಗರದಲ್ಲಿ ಮೊದಲ ಬಾರಿಗೆ ಪತ್ರಿಕಾ ವಿತರಕರ ಉತ್ಸವ- 2024 ಕಾರ್ಯಕ್ರಮವು ಡಿ.29ಕ್ಕೆ ನೆಹರು ರಸ್ತೆಯ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಎನ್.ಮಾಲತೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಪತ್ರಿಕೆ ವಿತರಕರ ಸಂಘಟಿತ ರಾಗಿ ಮಲೆನಾಡಿನ ಹೆಬ್ಬಾಗಿಲಿನಲ್ಲಿ ಒಂದು ಹೊಸ ರೀತಿಯಲ್ಲಿ ಕ್ರೀಡಾ ಕೂಟ ಮತ್ತು ಹಲವು ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಆರಂಭ ವಾಗಿ ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಚನ್ನಬಸಪ್ಪ ಉದ್ಘಾಟಿಸಲಿ ದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ, ಡಿ.ಎಸ್.ಅರುಣ್, ವಿಧಾನ ಪರಿಷತ್ ಮಾಜಿ ಸದಸ್ಯ ರುದ್ರೆಗೌಡರು, ವಾರ್ತಾಧಿಕಾರಿ ಮಾರುತಿ ಹಾಗೂ ಹಿರಿಯ ಪತ್ರಕರ್ತರು, ಸಂಪಾದಕರು ಉಪಸ್ಥಿತರಿರುವರು.
ಈ ಎಲ್ಲಾ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರು ಕುಟುಂಬ ಸಮೇತರಾಗಿ ಭಾಗವಹಿಸಿ ಕ್ರೀಡೆಯಲ್ಲಿ ಭಾಗವಹಿಸಿ ಗೆಲುವು ಸಾಧಿಸಿ ಉತ್ತಮ ಆಕರ್ಷಕ ಬಹುಮಾನ ಗೆಲ್ಲಬಹುದು, ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಯೊಬ್ಬ ಪತ್ರಿಕಾ ವಿತರಕರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಯ ಭಾಗವಾಗಬೇಕಾಗಿ ಮನವಿ ಮಾಡಿದ್ದಾರೆ.