ವಿಐಎಸ್ ಎಲ್ ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ನೀಡಿ: ಸಂಸದರಲ್ಲಿ ಮನವಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ವಿಐಎಸ್ ಎಲ್ ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ನೀಡುವ ನಿಟ್ಟಿನಲ್ಲಿ ಹಾಗು ಕಾರ್ಖಾನೆ ಅಭಿವೃದ್ಧಿಗೆ ಗಮನ ಹರಿಸುವಂತೆ ಗುತ್ತಿಗೆ ಕಾರ್ಮಿಕರ ನಿಯೋಗ ಸಂಸದ ಬಿ.ವೈ ರಾಘವೇಂದ್ರರನ್ನು ಭೇಟಿ ಮಾಡಿ ಮನವಿ ಮಾಡಿದೆ. 

ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ ರನ್ನು ಭೇಟಿ ಮಾಡಿದ ನಿಯೋಗ ಗುತ್ತಿಗೆ ಕಾರ್ಮಿಕರಿಗೆ ಯಾವುದೇ ರೀತಿಯ ಕೆಲಸದ ದಿನಗಳನ್ನು ಹೆಚ್ಚಿಸಿರುವುದಿಲ್ಲ ಮತ್ತು ಕಾರ್ಖಾನೆ ಯಾವುದೇ ರೀತಿಯಲ್ಲೂ ಅಭಿವೃದ್ಧಿ ಹೊಂದುವ ಲಕ್ಷಣಗಳು ಕಂಡು ಬರುತ್ತಿಲ್ಲ. ಈ ಕುರಿತು ಗಮನ ಹರಿಸಬೇಕೆಂದು ಮನವಿ ಮಾಡಲಾಯಿತು.

ಇದಕ್ಕೆ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿ, ಮುಂದಿನ ಎರಡು ತಿಂಗಳಲ್ಲಿ ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ಸಿಗುವಂತೆ ಮಾಡುತ್ತೇನೆ. ಅತಿಶೀಘ್ರ ದಲ್ಲಿ ಹೆಚ್ಚಿನ ಬಂಡವಾಳ ತೊಡಗಿಸು ವಂತೆ ಪುನಃ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಮೂಲಕ ಕಾರ್ಖಾನೆ ಯನ್ನು ಉತ್ಪಾದನೆಯತ್ತ ಕೊಂಡೊಯ್ಯಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು ಎಂದು ಗುತ್ತಿಗೆ ಕಾರ್ಮಿಕರ ನಿಯೋಗ ತಿಳಿಸಿದೆ.

ನಿಯೋಗದಲ್ಲಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು