ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ:ಚಂದ್ರಪ್ಪ ಎಸ್.ಗುಂಡುಪಲ್ಲ

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ ಎಂದು ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡುಪಲ್ಲ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ರೋವರ‍್ಸ್, ರೇಂಜರ‍್ಸ್ ಗಳಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ದಳ ನಿರ್ವಹಣೆ ಹಾಗೂ ಚಾರಣ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಜತೆಯಲ್ಲಿ ಮಕ್ಕಳಲ್ಲಿ ಕ್ರೀಯಾಶೀಲ ಚಿಂತನೆ ಬೆಳೆಸುವ ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಹೆಚ್ಚಿದೆ. ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಮಹತ್ತರ ಪಾತ್ರ ವಹಿಸಬೇಕು. ಪರಿಸರ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳ ಬೇಕು ಎಂದರು.

ಪ್ರಾಂಶುಪಾಲರ ಸಂಘದ ಅಧ್ಯಕ್ಷ, ಕಾಚಿನಕಟ್ಟೆ ಕಾಲೇಜಿನ ಪ್ರಾಂಶುಪಾಲ ಪಂಡರೀನಾಥ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇವೆಯು ಎಲ್ಲೆಡೆ ವಿಸ್ತರಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಸುವ ಹಾಗೂ ಜೀವನದಲ್ಲಿ ಸಾಧನೆ ಮಾಡುವ ಮನೋಭಾವ ಬೆಳೆಸುತ್ತಿದೆ ಎಂದರು.

ಮೂರು ದಿನಗಳ ಶಿಬಿರದ ಅಧ್ಯಕ್ಷತೆಯನ್ನು ಗೈಡ್ಸ್ ಆಯುಕ್ತೆ ಶಕುಂತಲಾ ಚಂದ್ರಶೇಖರ್ ವಹಿಸಿದ್ದು, ಶಿಬಿರದಲ್ಲಿ ತರಬೇತಿ ಪಡೆದು ಬರುವ ದಿನಗಳಲ್ಲಿ ಉನ್ನತ ಹಂತಕ್ಕೆ ತಲುಪಬೇಕು. ವಿದ್ಯಾರ್ಥಿಗಳು ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಹೇಳಿದರು.

ರೋವರ್ ವಿಭಾಗ ಜಿಲ್ಲಾ ಆಯುಕ್ತ ಕೆ.ರವಿ ಮಾತನಾಡಿ, ಶಿಬಿರದ ಉದ್ದೇಶ ಹಾಗೂ ಸ್ಕೌಟ್ಸ್ ಗೈಡ್ಸ್ ನಡೆದು ಬಂದ ಹಾದಿ ಬಗ್ಗೆ ವಿವರಿಸಿದರು. ಕೇಂದ್ರ ಸ್ಥಾನಿಕ ಆಯುಕ್ತ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಜಿ.ವಿಜಯಕುಮಾರ್, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ತರಬೇತಿ ಆಯುಕ್ತ ಶಿವಶಂಕರ್, ಜಂಟಿ ಕಾರ್ಯದರ್ಶಿ ವೈ.ಆರ್. ವೀರೇಶಪ್ಪ, ಲಕ್ಷ್ಮೀ ರವಿ, ಮಲ್ಲಿಕಾರ್ಜುನ ಕಾನೂರು, ಎಂ.ಕೆ.ಕೃಷ್ಣಸ್ವಾಮಿ, ಘನಶಾಮ್ ಗಿರಿಮಾಜಿ, ಪರಮೇಶ್ವರಯ್ಯ, ಪರಿಮಳಾ ಇತರರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು