ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರೊ.ಜೆ.ಎಲ್.ಪದ್ಮನಾಭ ಸೇರಿ ಹಲವರಿಗೆ ಸನ್ಮಾನ

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ಮಂಡ್ಯದಲ್ಲಿ ಇತ್ತೀಚೆಗೆ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 46 ಜನರಿಗೆ ಸನ್ಮಾನಿಸ ಲಾಯಿತು. 

ಈ ಸಂದರ್ಭದಲ್ಲಿ ಶಿವಮೊಗ್ಗದ ಶಿಕ್ಷಣತಜ್ಞ ಪ್ರೊ.ಜೆ.ಎಲ್.ಪದ್ಮನಾಭ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರೊ.ಪದ್ಮನಾಭ ಇವರನ್ನು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. 

ಇವರು ಕುವೆಂಪು ವಿಶ್ವವಿದ್ಯಾನಿಲಯದ ಶಿಕ್ಷಣಮಂಡಳಿ, ಸೆನೆಟ್ ಹಾಗೂ ಹಣಕಾಸು ಸಮಿತಿ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದ ರಲ್ಲದೇ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದು, ಶಿವಮೊಗ್ಗ ಜಿಲ್ಲಾ ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು