ಸಾಗರ-ಪ್ರವಾಸಿಗರ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

ವಿಜಯ ಸಂಘರ್ಷ ನ್ಯೂಸ್ 
ಸಾಗರ: ಮಂಗಳೂರಿನಿಂದ ಜೋಗ ಜಲಪಾತಕ್ಕೆ ವೀಕ್ಷಣೆಗೆ ಬರುತ್ತಿದ್ದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಮುಪ್ಪಾನೆ ಬಳಿ ನಡೆದಿದೆ.

ಅಪಘಾತದಲ್ಲಿ 15 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿದೆ. ಬಸ್ ಮಂಗಳೂರಿನಿಂದ ಜೋಗಕ್ಕೆ ಬರುತ್ತಿತ್ತು. ಈ ವೇಳೆ, ಮುಪ್ಪಾನೆ ಬಳಿಯ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು