ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ರಾಜ್ಯ ಒಬ್ಬ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ತಾಗಿದೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅವಿಸ್ಮರಣೀಯ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ರಮೇಶ್ ಶೆಟ್ಟಿ ಶಂಕರಘಟ್ಟ ಹೇಳಿಕೆಯಲ್ಲಿ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆ ಅನನ್ಯ ವಾದುದು.ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆಯಿಂದಾಗಿ ಈಗಿನ ರಾಜಕಾರಣಿಗಳಿಗೆ ಮಾದರಿ ಯಾಗಿದ್ದರು ಎಂದಿದ್ದಾರೆ.