ವಿಜಯ ಸಂಘರ್ಷ ನ್ಯೂಸ್
ಕೆ.ಆರ್.ಪೇಟೆ: ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿ ಗಳನ್ನು ನಿರ್ಲಕ್ಷ್ಯ ಮಾಡದೇ ಜಾಗರೂಕತೆ ಯಿಂದ ನೋಡಿಕೊಳ್ಳಬೇಕು.ಹಳ್ಳಿಗಾಡಿನ ಕಷ್ಟ ಗೊತ್ತಿರುವ ಮಕ್ಕಳು ವೈದ್ಯರಾದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೆಚ್.ಟಿ ಮಂಜು ಹೇಳಿದರು.
ತಾಲೂಕಿನ ಕಿಕ್ಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಶಸ್ತ್ರಚಿಕಿತ್ಸೆ ಕೊಠಡಿ ಮತ್ತು ಉಪಕರಣಗಳಿಗೆ ಚಾಲನೆ ನೀಡಿ ಮಾತನಾಡಿದರು.
ಕಿಕ್ಕೇರಿ ಹೋಬಳಿ ದಿನದಿಂದ ದಿನಕ್ಕೆ ತಾಲೂಕು ಕೇಂದ್ರದಂತೆ ವಿಸ್ತೀರ್ಣಗೊಂಡರು ಆರೋಗ್ಯ ವಿಚಾರದಲ್ಲಿ ಶಸ್ತ್ರಚಿಕಿತ್ಸೆಗೆ ತಾಲೂಕು ಕೇಂದ್ರ ಸ್ಥಾನಕ್ಕೆ ಹಾಗೂ ಪಕ್ಕದ ಜಿಲ್ಲೆ ಚನ್ನರಾಯ ಪಟ್ಟಣ ತಾಲೂಕಿಗೆ ಅಥವಾ ಮೈಸೂರುಗೆ ತೆರಳು ಪರಿಸ್ಥಿತಿ ಅನಿವಾರ್ಯವಾಗಿತ್ತು.ಈಗ ಅವಶ್ಯಕತೆವುಳ್ಳ ಶಸ್ತ್ರಚಿಕಿತ್ಸೆ ಕೊಠಡಿ ಸಲಕರಣೆಗಳಿಗೆ ಚಾಲನೆ ನೀಡಿದ್ದೇವೆ ಈ ಭಾಗದ ಜನರು ಸದುಪಯೋಗ ಪಡೆದು ಕೊಳ್ಳಬೇಕು.ಸಾಮಾನ್ಯ ಜನರಿಗೆ, ಬಡವರಿಗೆ, ದಲಿತರಿಗೆ ಬಹಳಷ್ಟು ಸುಸಜ್ಜಿತವಾದ ಕಿಕ್ಕೇರಿ ಆಸ್ಪತ್ರೆ ನಿರ್ಮಾಣವಾಗಿ ಜನರಿಗೆ ಸೇವೆ ನೀಡುತ್ತಿರುವುದು ಸಂತಸದ ವಿಚಾರ.ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಾಗಿ ಬರುವವರು ಶ್ರೀಮಂತ ವರ್ಗದವರಲ್ಲ. ಸಾಮಾನ್ಯವಾಗಿ ಬಡವರು, ಕೆಳವರ್ಗದವರು ಮಾತ್ರ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಬಡವರು ದುಬಾರಿ ವೆಚ್ಚವನ್ನು ಕೊಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿಯೇ ಸರ್ಕಾರಿ ಆಸ್ಪತ್ರೆಗಳು ಅಗತ್ಯವಿದೆ.ಹಣವಿರುವವರು ಎಲ್ಲಿಗೆ ಬೇಕಾದರೂ ಹೋಗಿ ಚಿಕಿತ್ಸೆ ಪಡೆಯುತ್ತಾರೆ . ಆದರೆ ಬಡವರು ಎಲ್ಲಿಗೆ ಹೋಗಲು ಸಾಧ್ಯ? ಹಿಂದೆಲ್ಲಾ ಸಕ್ಕರೆ ಕಾಯಿಲೆ, ರಕ್ತದೊತ್ತಡ ಶ್ರೀಮಂತರ ಕಾಯಿಲೆ ಎನ್ನುತ್ತಿದ್ದರು. ಈಗ ಬಡವರಿಗೆ ಹಾಗೂ ಸಣ್ಣ ವಯಸ್ಸನವರಿಗೂ ಬರಲು ಶುರುವಾಗಿದೆ. ಊಟದ ಕ್ರಮದಲ್ಲಿ ಬದಲಾವಣೆಯಾಗಿದ್ದು ದೈಹಿಕ ವ್ಯಾಯಾಮ ಕೂಡ ಇಲ್ಲವಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ಇರಲೇಬೇಕು. ಕ್ರೀಡಾಪಟುಗಳಿಗೂ ಸಾಮಾನ್ಯ ಜನರಿಗೂ ವ್ಯತ್ಯಾಸವನ್ನು ಸುಲಭವಾಗಿ ಗುರುತಿಸ ಬಹುದು. ಆರೋಗ್ಯ ಬಹಳ ಮುಖ್ಯ. ವಯಸ್ಸಿಗೆ ಸರಿಯಾಗಿ ದೈಹಿಕ ವ್ಯಾಯಾಮವಿಲ್ಲದೆ, ಆಹಾರ ಪದ್ದತಿಯನ್ನು ಉತ್ತಮವಾಗಿಟ್ಟುಕೊಳ್ಳದೇ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಸಿ.ಎನ್ ಪುಟ್ಟಸ್ವಾಮೀಗೌಡ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಮಲ್ಲೇಶ್, ಕಿಕ್ಕೇರಿ ಹೋಬಳಿಯ ಜೆಡಿಎಸ್ ಅಧ್ಯಕ್ಷ ಕಾಯಿ ಮಂಜೇಗೌಡ, ಮುಖಂಡ ಕೃಷ್ಣಗೌಡ,ಶೇಖರ್,ಗ್ರಾ.ಪಂ ಅಧ್ಯಕ್ಷ ಪುಟ್ಟರಾಜು,ಉಪಾಧ್ಯಕ್ಷೆ ಜ್ಯೋತಿ ದಯಾನಂದ್,ಸದಸ್ಯರಾದ ರಾಜೇಶ್, ಸೊಳ್ಳೆಪುರ ಬಾಲಣ್ಣ, ತಾಲೂಕು ವೈದ್ಯಧಿಕಾರಿ ಡಾ: ಅಜಿತ್,ಕಿಕ್ಕೇರಿ ಆಸ್ಪತ್ರೆ ವೈದ್ಯಾಧಿಕಾರಿ ಸೌಜನ್ಯ,ಡಾ ಅರವಿಂದ್, ಡಾ ಚಂದನ್, ಡಾ ಕೃತಿಕ್, ಸತೀಶ್, ಪಿಡಿಓ ಚಲುವರಾಜು, ಸೇರಿದಂತೆ ಉಪಸ್ಥಿತರಿದ್ದರು
(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)
Tags:
ಕೆ ಆರ್ ಪೇಟೆ ವರದಿ