ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕರ್ತವ್ಯ ಲೋಪವೇಸಗಿದ ತಾಲ್ಲೂಕು ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಶುಕ್ರವಾರ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಆಗ್ರಹಿಸಿದ್ದಾರೆ.
ನಗರದ ಜನ್ನಾಪುರ ಫಿಲ್ಟರ್ ಶೆಡ್ ವ್ಯಾಪ್ತಿ ಯಲ್ಲಿ ಅಕ್ರಮವಾಗಿ ಖಾಸಗಿ ವ್ಯಕ್ತಿಗಳು ಸಾರ್ವಜನಿಕರ ಹಾಗೂ ಅಂತರಘಟ್ಟಮ್ಮ ದೇವರ ಹೆಸರಿನಲ್ಲಿ ಶಾಸಕರ ಸಂಸದರ ವಿಧಾನ ಪರಿಷತ್ ಸದಸ್ಯರ ಅನುದಾನವನ್ನು ಅಕ್ರಮವಾಗಿ ಬಳಸಿಕೊಂಡು ಸಮುದಾಯ ಭವನ ನಿರ್ಮಾಣ ಮಾಡಿ ಅದರಿಂದ ಬರುವಂತಹ ಆದಾಯವನ್ನು ಟ್ರಸ್ಟ್ ಹೆಸರಿನಲ್ಲೇ ಬಳಸಿಕೊಂಡು ಹಣ ಮಾಡುವ ದಂಧೆಯಲ್ಲಿ ತೊಡಗಿದ್ದಾರೆಂದು ಆರೋಪಿಸಿದರು.
ನಿರ್ಮಾಣ ಮಾಡಿರುವ ಸಮುದಾಯ ಭವನದ ಜಾಗ ಕೊಳಗೇರಿ ಮಂಡಳಿಯ ಸ್ಲಂ ಬೋರ್ಡ್ ಗೆ ಸೇರಿದ ಜಾಗವೋ, ಕಂದಾಯ ಇಲಾಖೆಗೆ ಸೇರಿದ ಜಾಗವೂ ಅಥವಾ ಯಾವ ಇಲಾಖೆಗೆ ಸೇರಿದೆ ಎಂಬುದರ ಬಗ್ಗೆ ಮಾಹಿತಿ ಯನ್ನು ಸಂಗ್ರಹಿಸಿ ಅಕ್ರಮವಾಗಿ ಸಮುದಾಯ ಭವನ ನಿರ್ಮಾಣ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಕಳೆದ 10 ತಿಂಗಳಿನಿಂದ ಸ್ಥಳೀಯ ಫಿಲ್ಮರ್ ಶೆಡ್ಡಿನ ನಾಗರಿಕರು ಹಲವಾರು ಬಾರಿ ತಹಸೀಲ್ದಾರ್ ಕಚೇರಿಗೆ ಮನವಿ ನೀಡಿದರೂ ಇದುವರೆಗೂ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಟ್ಟ ಮನವಿಗೆ ಯಾವುದೇ ರೀತಿಯ ಹಿಂಬರಹಗಳನ್ನು ನೀಡದೆ ಕರ್ತವ್ಯ ಲೋಪಏಸಗಿದ್ದು ತಾವು ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮುದಾಯ ಭವನದ ಜಾಗವನ್ನು ಸರ್ವೆ ಮಾಡಿಸಿ ಸದರಿ ಜಾಗ ಯಾವ ಇಲಾಖೆಗೆ ಸೇರಿದೆ ಎಂಬುದನ್ನು ಖಾತರಿ ಪಡಿಸಿಕೊಂಡು ಫಿಲ್ಮರ್ ಶೆಡ್ ನಾಗರಿಕರಿಗೆ ಶುಭ ಸಮಾರಂಭ ಕಾರ್ಯಕ್ರಮ ಗಳಿಗೆ ಸಮುದಾಯಭವನವನ್ನು ಬಳಸಿ ಕೊಳ್ಳಲು ಅನುಕೂಲ ಮಾಡಿಕೊಡ ಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಕೂಡಲೇ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಅಂತರಘಟ್ಟಮ್ಮ ದೇವಿ ಹೆಸರಿನಲ್ಲಿ ಅಕ್ರಮವಾಗಿ ಟ್ರಸ್ಟ್ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದು ಕೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಪ್ರತಿಭಟನೆ ಸಂದರ್ಭದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಬಿ ಎನ್ ರಾಜು, ಸಾಮಾಜಿಕ ಹೋರಾಟಗಾರ ಶಶಿಕುಮಾರ್, ಸೂಡ ಸದಸ್ಯ ರವಿಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಗ್ರೇಡ್ -2 ತಹಸೀಲ್ದಾರ್ ಮಂಜನಾಯ್ಕ ರವರ ಮೂಲಕ ಮನವಿ ಸಲ್ಲಿಸಿದರು.