ವಿಜಯ ಸಂಘರ್ಷ ನ್ಯೂಸ್
ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ ಮಹಿಳಾ ಉದ್ಯಮಿಗಳು ದೊಡ್ಡ ಮಟ್ಟಕ್ಕೆ ಬೆಳೆಯಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷರಾದ ಬಿ.ಗೋಪಿನಾಥ್ ನುಡಿದರು.
ಅವರು ಉಬುಂಟು ಒಕ್ಕೂಟ ಸ್ವೇದ ಮಹಿಳಾ ಉದ್ಯಮಿಗಳ ಸಂಘ ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳಾ ಉದ್ಯಮಿ ಗಳಿಗೆ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ರೆಡ್ ಬಸ್,ಐಡಿ ಸಂಸ್ಥೆಗಳನ್ನು ಉದಾಹರಿಸಿ ಮಾತನಾಡಿದ ಅವರು ಮಹಿಳೆಯರು ಇಂತಹ ಕಾರ್ಯಾಗಾರ ಗಳಲ್ಲಿ ಭಾಗವಹಿಸಿ ದೊರೆತ ತರಬೇತಿ ಯನ್ನು ಉಪಯೋಗಿಸಿ ದೊಡ್ಡ ಮಟ್ಟಕ್ಕೆ ಬೆಳೆಯಬೇಕೆಂದರು.
ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆ ಡಾ. ಬಿ.ವಿ.ಲಕ್ಷ್ಮಿದೇವಿ ಗೋಪಿನಾಥ್ ಮಾತನಾಡಿ ಉಬುಂಟು ಒಕ್ಕೂಟ ಸ್ವೇದ ಸಂಸ್ಥೆ ಹಾಗೂ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘ ಎಲ್ಲವೂ ಮಹಿಳಾ ಉದ್ಯಮಿಗಳ ಅಭಿವೃದ್ಧಿ ಗಾಗಿ ಹಲವು ಕಾರ್ಯಕ್ರಮ ಗಳನ್ನು ನಿರಂತರವಾಗಿ ಮಾಡುತ್ತಾ ಬರುತ್ತಿವೆ. ಮಹಿಳಾ ಉದ್ಯಮಿಗಳು ಹಾಗೂ ಉದ್ಯಮಿಗಳಾಗ ಬಯಸು ವವರು ಇದರ ಸದುಪಯೋಗ ಪಡೆದುಕೊಂಡು ಬೆಳವಣಿಗೆಯ ಹಾದಿಯಲ್ಲಿ ಸಾಗಬೇಕೆಂದರು.
ಕಾರ್ಯಾಗಾರದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಸರ್ಕಾರದ ಯೋಜನೆಗಳ ಬಗ್ಗೆ ಸುದೀರ್ಘ ಮಾಹಿತಿ ನೀಡಿದರು.
SIDBI ಬ್ಯಾಂಕ್ ನ ಶಾಖಾ ನಿರ್ವಾಹಕ ಶಿವಕುಮಾರ್ ಬಿಲ್ಲು ಹಣಕಾಸಿನ ದೊರಕುವಿಕೆಯ ಬಗ್ಗೆ ಮಾಹಿತಿ ನೀಡಿದರು. ತರಬೇತುದಾರ ಹನುಮಂತಪ್ಪ ZED , FSSAI, ಪ್ರಮಾಣ ಪತ್ರದ ಬಗ್ಗೆ ಹಾಗೂ ಲೀನ್ ಮ್ಯಾನುಫ್ಯಾಕ್ಚರಿಂಗ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.
ತರಬೇತುದಾರರಾದ ರಚನಾ ಮಹೇಶ್ ಡಿಜಿಟಲ್ ತಂತ್ರಜ್ಞಾನದ ಬಳಕೆಯ ಬಗ್ಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಕಟ ಪೂರ್ವ ಅಧ್ಯಕ್ಷ ಎನ್. ಗೋಪಿನಾಥ, ಉಪಾಧ್ಯಕ್ಷ ವಿಜಯ ಕುಮಾರ್, ಕಾರ್ಯದರ್ಶಿ ಸುರೇಶ್, ಖಜಾಂಚಿ ಮನೋಹರ್,ಸಹನ ಸುಭಾಷ್, ಸ್ವೇದ ಸಂಸ್ಥೆಯ ಕಾರ್ಯದರ್ಶಿ ಶಿಲ್ಪ ಗೋಪಿನಾಥ್, ಖಜಾಂಚಿ ಸಹನ ಚೇತನ್ ಉಪಸ್ಥಿತರಿದ್ದರು.
Tags:
ಶಿವಮೊಗ್ಗ ಸುದ್ದಿ