ವಿಜಯ ಸಂಘರ್ಷ ನ್ಯೂಸ್
ಬೆಂಗಳೂರು: ವಿದೇಶಾಂಗ ಮಾಜಿ ಸಚಿವ, ಕರ್ನಾಟಕದ ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಕರ್ನಾಟಕದ ಹಿರಿಯ ರಾಜಕಾರಣಿಗಳ ಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಗಳಾ ಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.
ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು 1999 ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿ ಯಾಗಿದ್ದರು ಮತ್ತು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲ ರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.
Tags:
ಸ್ಟೇಟ್ ನ್ಯೂಸ್