ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮೆಸ್ಕಾಂ ಶಿವಮೊಗ್ಗ ಎಂ.ಆರ್.ಎಸ್ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿ.23ರ ಸೋಮವಾರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ಮೆಸ್ಕಾಂ ನಗರ ಹಾಗೂ ಗ್ರಾಮೀಣ ಉಪವಿಭಾಗಗಳ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಲು ಕೋರಲಾಗಿದೆ.
ಹಳೇನಗರ, ತಾಲೂಕು ಕಚೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿನಬಾಗಿಲು, ಶ್ರೀ ಹಳದಮ್ಮ ದೇವಿ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಸಮನೆ, ಎನ್.ಎಂ.ಸಿ ರಸ್ತೆ, ಭೋವಿ ಕಾಲೋನಿ, ಸಂತೆಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ ಇತ್ಯಾದಿ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.