ಕೇಂದ್ರ ಗೃಹ ಸಚಿವ ಅಮೀತ್ ಷಾ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಕಾಂಗ್ರೆಸ್ ಆಗ್ರಹ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಕೇಂದ್ರ ಗೃಹ ಸಚಿವ ಅಮೀತ್ ಷಾ ರವರು ಲೋಕಸಭಾ ಅಧಿವೇಶನದಲ್ಲಿ ಡಾ.ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ರವರ ಬಗ್ಗೆ ಹಗುರವಾಗಿ ಹಾಗೂ ಬೇಜಾಬ್ದಾರಿ ತನದಿಂದ ಮಾತನಾಡಿ ದ್ದಾರೆಂದು ಆರೋಪಿಸಿ ಗುರುವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಡಾ.ಬಾಬಾ ಸಾಹೇಬರ ಬಗ್ಗೆ ಮಾಡಿರುವ ಅಪಮಾನದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಮುಖಂಡರು ಶಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸ ಬೇಕೆಂದು ಪಟ್ಟು ಹಿಡಿದರು.

ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ನಗರಸಭಾಧ್ಯಕ್ಷ ಎ ಎನ್ ಎಸ್ ಮಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಸದಸ್ಯ ಬಿ.ಕೆ.ಮೋಹನ್ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ರಾದ ಶಿವಕುಮಾರ್, ಮುಸಾಫಿರ್ ಬಾಷ, ಮುಖಂಡರಾದ ಮಂಜುನಾಥ್, ಸಿ.ಜಯಪ್ಪ, ಈಶ್ವರಪ್ಪ, ಜುಂಜಾನಾಯ್ಕ, ಮಹಮ್ಮದ್ ರಫಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು