ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ನಾಳೆ ಇರಲ್ಲ

ವಿಜಯ ಸಂಘರ್ಷ ನ್ಯೂಸ್ 
ಹೊಸನಗರ: ರಿಪ್ಪನ್ ಪೇಟೆ ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ 3 ಫೇಸ್ ವಿದ್ಯುತ್ ಸರಬರಾಜು ಇರುವುದಿಲ್ಲ.

ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದ ರಿಂದ ರೈತರ ಪಂಪ್ ಸೆಟ್ ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬ ರಾಜಿನಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ.

ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ,ಗರ್ತಿಕೆರೆ, ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾ ಪಂ ವ್ಯಾಪ್ತಿಯ ಪ್ರದೇಶಗಳಿಗೆ 3 ಫೇಸ್ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು