ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ಜಂಕ್ಷನ್ ಸಮೀಪದ ರಂಗನಾಥಪುರ ಬಳಿ ತಿರುವಿನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

 ತರೀಕೆರೆ ತಾಲ್ಲೂಕಿನ ನೇರಲಕೆರೆ ಗ್ರಾಮದ ದೇವರಾಜ್ ಎಂಬುವರು ಸ್ನೇಹಿತರ ಜತೆ ಶಿವಮೊಗ್ಗದಿಂದ ತರೀಕೆರೆ ಕಡೆ ಹೋಗುತ್ತಿರು ವಾಗ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿದೆ.

 ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಾರ್ವಜನಿಕರ ನೆರವಿನಿಂದ ಗಾಯಾಳು ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು