ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಬಿಜೆಪಿ ತಾಲೂಕು ಮಂಡಲದ ಮಾಜಿ ಅಧ್ಯಕ್ಷ ಜಿ.ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಆರೋಗ್ಯ ಸೌಲಭ್ಯ ನೋಂದಣಿ ಅಭಿಯಾನಕ್ಕೆ ಬಿಳಿಕಿ ಮಠದ ಪೀಠಾಧ್ಯಕ್ಷ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
ನಗರದ ಹೊಸಮನೆ ಮುಖ್ಯ ರಸ್ತೆ (ಸಂತೆ ಮೈದಾನದ ಎದುರು) ಜಿ.ಆನಂದಕುಮಾರ್ ರವರ ಕಚೇರಿಯಲ್ಲಿ ನಡೆದ ಅಭಿಯಾನದಲ್ಲಿ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ಯವರ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು, ಈ ಯೋಜನೆ ಯಡಿ 70 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ 5 ಲಕ್ಷ ರೂ . ಗಳವರೆಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೌಲಭ್ಯ ಒದಗಿಸುವುದಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಯಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಮಧುಕರ್‌ಕಾನಿಟ್ಟರ್, ಪ್ರಮುಖರಾದ ಮೈಲಾರಪ್ಪ, ಉದಯ ಕುಮಾರ್, ಶಿವಕುಮಾರ್, ಸುಬ್ರಮಣ್ಯ, ಮಂಜುಳ, ಶಕುಂತಲ ಇನ್ನಿತರರಿದ್ದರು.
ಅಭಿಯಾನದಲ್ಲಿ ನೂರಾರು ಮಂದಿ ಪಾಲ್ಗೊಂಡು ಸದುಪಯೋಗ ಪಡೆದುಕೊಂಡರು. ಅಭಿಯಾನ ಯಶಸ್ವಿಗೆ ಕಾರಣಕರ್ತರಾದ ಪ್ರತಿಯೊಬ್ಬರಿಗೂ ಜಿ. ಆನಂದ ಕುಮಾರ್‌ಮತ್ತು ಮಂಗೋಟೆ ರುದ್ರೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.
Tags:
ಭದ್ರಾವತಿ ಸುದ್ದಿ