ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ವಾರ್ಡ್ ನಂ.29 ರ ಜನ್ನಾಪುರ ಕೆರೆ ಪ್ರವಾಸಿಗರ ತಾಣವನ್ನಾಗಿ ಅಭಿವೃದ್ಧಿಪಡಿಸಲು ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸು ವಂತೆ ಒತ್ತಾಯಿಸಿ ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್ ರವರಿಗೆ ಇಂದು ನಗರದ ಜನ್ನಾಪುರ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿ ಯಿಂದ ಮನವಿ ಸಲ್ಲಿಸಲಾಗಿದೆ.
ನಗರಸಭೆ ವಾರ್ಡ್ ನಂ.15ರ ಹೊಸಮನೆ ತಮ್ಮಣ್ಣ ಕಾಲೋನಿ ಹಿಂಭಾಗದಲ್ಲಿರುವ ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ 50 ಎಕರೆ 20 ಗುಂಟೆ ವಿಸ್ತೀರ್ಣ ಹೊಂದಿರುವ ಸರ್ಕಾರಿ ಹಿರೇಕೆರೆ ಅಭಿವೃದ್ಧಿಗೆ ಸಂಬಂಧಿಸಿ ದಂತೆ ಸ್ಥಳಕ್ಕೆ ಆಗಮಿಸಿ ಕೆರೆ ವೀಕ್ಷಣೆ ನಡೆಸುವಂತೆ ಮನವಿಯಲ್ಲಿ ಕೋರಲಾಗಿದೆ.
ಜನ್ನಾಪುರ ಕೆರೆಗೆ ನೂರಾರು ವರ್ಷ ಗಳಿಂದ ಕಲ್ಮಶಗೊಂಡಿರುವ ನೀರು ಬಂದು ಸೇರುತ್ತಿದ್ದು, ಇದರಿಂದಾಗಿ ಕೆರೆಯಿಂದ ದುರ್ವಾಸನೆ ಬರುತ್ತಿದೆ. ಅಲ್ಲದೆ ಸುತ್ತಮುತ್ತಲ ಪರಿಸರದಲ್ಲಿ ನೈರ್ಮಲ್ಯ ಹದಗೆಟ್ಟು ಸ್ಥಳೀಯ ನಿವಾಸಿ ಗಳ ಆರೋಗ್ಯದ ಮೇಲೆ ದುಷ್ಪರಿ ಣಾಮ ಉಂಟು ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಕ್ಷೇತ್ರದ ಅನ್ನದಾತ, ಶ್ರೇಷ್ಠ ತಂತ್ರಜ್ಞ, ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಹೆಸರಿನಲ್ಲಿ ಕೆರೆ ಪ್ರವಾಸಿಗರ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಮನವಿ ಮಾಡಲಾಗಿದೆ.
ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ತಹಸೀಲ್ದಾರ್, ನಗರಸಭೆ ಪೌರಾಯು ಕ್ತರು, ಕರ್ನಾಟಕ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿ ವರ್ಗದವರು ಹಾಗು ಕೆರೆ ಸಮೀಪದ ರೈತರನ್ನೊಳಗೊಂಡ ಒಂದು ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಮನವಿ ಸ್ವೀಕರಿಸಿದ ಎಚ್.ಎಸ್ ಸುಂದರೇಶ್ ರವರು ಕೆರೆ ಅಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ದೊರೆತ ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿ ಸುವು ದಾಗಿ ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್.ವೇಣುಗೋಪಾಲ್ ರವರಿಗೆ ಭರವಸೆ ನೀಡಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಕಲ್ಲಹಳ್ಳಿ ಗ್ರಾಮದ ಧರ್ಮಣ್ಣ ಹಾಗೂ ಕೋಡಿಹಳ್ಳಿ ಸತ್ಯ ಉಪಸ್ಥಿತರಿದ್ದರು.