ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಆಶ್ರಿತ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಗಳು ಮತ್ತು ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಪಿ. ರಾಕೇಶ್ ಇವರನ್ನು ಎರಡು ವರ್ಷಗಳ ಅವಧಿಗೆ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿನ (Academic Council) ಸದಸ್ಯರಾಗಿ ನೇಮಕ ಮಾಡಲಾಗಿದೆ.
ಇವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ವಿದ್ಯಾ ಸಂಸ್ಥೆಯ ಪ್ರಧಾನ ಪೋಷಕ ಸಿ.ಎಸ್.ಷಡಾಕ್ಷರಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಿದ್ದಬಸಪ್ಪ ಬಿ ಹಾಗೂ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ನಿರ್ದೇಶಕರುಗಳು, ಎಲ್ಲಾ ವಿಭಾಗದ ಮುಖ್ಯಸ್ಥರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.