ಶಿವಮೊಗ್ಗ: ನಗರದ ಪ್ರೇರಣಾ ಎಜುಕೇಶನ್ ಟ್ರಸ್ಟ್ನಲ್ಲಿ ಆಯೋಜಿಸಿದ್ದ ಅನ್ವೇಷಣಾ ಮಲ್ನಾಡ್ ಸ್ಟಾರ್ಟ್ ಅಪ್ 2025 ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರನ್ನು ಸನ್ಮಾನಿಸಲಾಯಿತು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಕಾರ್ಯದರ್ಶಿ ಎ.ಎಂ.ಸುರೇಶ್, ಉಪಾಧ್ಯಕ್ಷ ಜಿ.ವಿಜಯಕು ಮಾರ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ್ ಅಂಗಡಿ, ಲಕ್ಷ್ಮಿದೇವಿ ಗೋಪಿನಾಥ್, ವಿ.ಕೆ.ಜೈನ್, ಕೆಮಿಸ್ಟ್ ಮತ್ತು ಡ್ರಗ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಎಂ.ಶoಕರ್ ಉಪಸ್ಥಿತರಿದ್ದರು.
Tags
ಶಿವಮೊಗ್ಗ ನ್ಯೂಸ್